Friday, 22nd November 2024

ಸಿ.ಟಿ. ರವಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ವಿ.ಆರ್‌.ವಾಲಾ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಸಿ.ಟಿ. ರವಿ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ವಿ.ಆರ್‌.ವಾಲಾ ಅಂಗೀಕರಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ, ಯುವಜನ ಮತ್ತು ಕ್ರೀಡಾ ಖಾತೆ ಸಚಿವರಾಗಿದ್ದ ಸಿ.ಟಿ. ರವಿ, ಇತ್ತೀಚೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗುವ ಜತೆಗೆ ದಕ್ಷಿಣ ಭಾರತ ಉಸ್ತುವಾರಿಯಾಗಿಯೂ ನಿಯೋಜನೆಗೊಂಡಿದ್ದರು.

“ಒಬ್ಬ ವ್ಯಕ್ತಿ- ಒಂದು ಹುದ್ದೆ’ ಎಂಬ ಪಕ್ಷದ ನಿಯಮದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಖ್ಯ ಮಂತ್ರಿಗಳು ಅಂಗೀಕರಿಸಿರಲಿಲ್ಲ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಮುಗಿದ ಬೆನ್ನಲ್ಲೇ ಬಿ.ಎಸ್‌.ಯಡಿಯೂರಪ್ಪ ಅವರ ಶಿಫಾರಸ್ಸಿನ ಮೇಲೆ ರಾಜ್ಯ ಪಾಲರು ರಾಜೀನಾಮೆ ಅಂಗೀಕರಿಸಿದ್ದಾರೆ.