ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ (ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕನಿಷ್ಠ 10 ಸದಸ್ಯರು), ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಬೆಂಗಳೂರು ನಗರ (Bengaluru News) ಜಿಲ್ಲೆಯ ಭೋವಿ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಸುದ್ದಿಯನ್ನೂ ಓದಿ | DK Shivakumar: ಬೆಂಗಳೂರಿನ ಸಂಚಾರ ನಿಯಂತ್ರಣಕ್ಕೆ ಕ್ರಮ; ಡಿ.ಕೆ. ಶಿವಕುಮಾರ್
ಆಸಕ್ತ ಅಭ್ಯರ್ಥಿಗಳು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ ಮೂಲಕ ಗ್ರಾಮ ಒನ್/ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಮುಖಾಂತರ ಅರ್ಜಿಗಳನ್ನು ಅಕ್ಟೋಬರ್ 10 ರೊಳಗೆ ಸಲ್ಲಿಸಬೇಕು.
ಈ ಸುದ್ದಿಯನ್ನೂ ಓದಿ | Beauty Parlor Training: ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್; ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ‍್ಥಾಪಕರುಗಳ ಕಚೇರಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ, ನಂ.29/19 ರಾಜಿನಗರ 1ನೇ ಬ್ಲಾಕ್, 12ನೇ ಮೈನ್ ನವರಂಗ್ ಥಿಯೇಟರ್ ಮುಂಭಾಗ, ನಳಪಾಕ ಹೋಟೆಲ್ ಹತ್ತಿರ, ಬೆಂಗಳೂರು-560 010 ಅಥವಾ ದೂರವಾಣಿ ಸಂಖ್ಯೆ: 080-23421533 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ‍್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.