Wednesday, 25th September 2024

Pratap Simha: ಪ್ರಚೋದನಕಾರಿ ಭಾಷಣ, ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ದೂರು ದಾಖಲು

Pratap Simha

ಯಾದಗಿರಿ: ಗಣೇಶ ವಿಸರ್ಜನೆ (Ganesha visarjan) ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ (provocative speech) ಮಾಡಿದ್ದಾರೆ ಎಂದು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಯಾದಗಿರಿ ಜಿಲ್ಲೆಯ (Yadgir news) ಶಹಾಪುರ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಇದೇ 21ರಂದು ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಬಿಜೆಪಿ ಸಂಸದ, ಪ್ರತಾಪ್ ಸಿಂಹ ಭಾಷಣ ಮಾಡಿದ್ದರು. ಗಣೇಶ ವಿಸರ್ಜನೆ ನಡೆಯುವ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಿಸುತ್ತಿದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಒಂದೊಂದು ಕಲ್ಲು ಹಿಡಿದುಕೊಂಡ್ರೆ ನಿಮ್ಮ ಕಥೆ ಏನಾಗುತ್ತದೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ? ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರತಾಪ್‌ ಸಿಂಹ ಮುಸ್ಲಿಮರ ಧಾರ್ಮಿಕ ನಂಬಿಕೆಗಳಿಗೆ ಅವಮಾನ ಆಗುವಂತೆ, ದ್ವೇಷ ಮೂಡಿಸುವಂತೆ ಮಾತನಾಡಿದ್ದಾರೆ. ಗಲಭೆ ಸೃಷ್ಟಿಯಾಗುವಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಹಾಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಶಹಾಪುರ ಪಿಎಸ್ಐ ಡಿ.ವಿ.ನಾಯಕ ಅವರು ಸ್ವಯಂಕೃತ ದೂರು ದಾಖಲಿಸಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ 5 ಜನರ ವಿರುದ್ಧ ಬಿಎನ್ಎಸ್ ಕಾಯ್ದೆಯಡಿ 299, 192 ಕಾಯ್ದೆಯಡಿ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ: Pratap Simha: ಶಾಸಕ ದರ್ಶನಾಪುರ ಹಿಂದು ವಿರೋಧಿ: ಪ್ರತಾಪ್‌ ಸಿಂಹ ಕಿಡಿ