Sunday, 24th November 2024

Stabbing incident: ಪ್ರೀತಿಸುತ್ತಿದ್ದ ಹುಡುಗಿಯ ತಾಯಿಗೇ ಚಾಕು ಇರಿದ ಪಾಗಲ್‌ ಪ್ರೇಮಿ!

Stabbing incident

ಹುಬ್ಬಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತ ಹುಡುಗಿಯ ಹಿಂದ ಬಿದ್ದ ಪಾಗಲ್ ಪ್ರೇಮಿಯೊಬ್ಬ, ತಾನು ಪ್ರೀತಿಸುತ್ತಿದ್ದ ಹುಡುಗಿಯ ತಾಯಿಗೇ ಚಾಕು ಇರಿದ ಘಟನೆ ನಗರದ ಲೋಹಿಯಾ ನಗರದಲ್ಲಿ ನಡೆದಿದೆ. ಮಹೇಶ್ (24) ಎಂಬಾತನೇ ನೀಲಾ ಹಂಪಣ್ಣವರ್ ಎಂಬಾತ ಆರೋಪಿಯಾಗಿದ್ದಾನೆ. ಇನ್ನು ಘಟನೆ (Stabbing incident) ನಡೆದ ಕೆಲವೊತ್ತಿನಲ್ಲೇ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.

ನೀಲಾ ಹಂಪಣ್ಣನವರ ಗಾಯಾಳು. ಸಂಜೆ 4 ಗಂಟೆಯ ಸುಮಾರಿಗೆ ಆರೋಪಿ ಮಹೇಶ, ಮಹಿಳೆಗೆ ಹೊಟ್ಟೆ ಭಾಗಕ್ಕೆ ಚಾಕು ಇರಿದು ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಗಾಯಾಳು ಹಾಗೂ ಆಕೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಕೆಲವೊತ್ತಿನಲ್ಲಿ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗುಂಡು ತಿಂದಿರುವ ಆರೋಪಿ ಹಾಗೂ ಗಾಯಾಳು ಅಧಿಕಾರಿಯನ್ನು ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಮಹೇಶನನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Donald Trump: ಇರಾನ್‌ನಿಂದ ನನ್ನ ಹತ್ಯೆಗೆ ಸಂಚು- ಡೆಡ್ಲಿ ಅಟ್ಯಾಕ್‌ ಬಗ್ಗೆ ಮೌನ ಮುರಿದ ಟ್ರಂಪ್‌

ಗಾಯಗೊಂಡಿರುವ ನೀಲಾ ಅವರ ಮಗಳಿಗೆ ಆರೋಪಿ ಮಹೇಶ್ ಮದುವೆಯಾಗು, ಲವ್ ಮಾಡು ಎಂದು ಐದು ವರ್ಷದಿಂದ ಬಲವಂತ ಮಾಡುತ್ತಿದ್ದ. ಬುಧವಾರ ಏಕಾಏಕಿ ಬಂದು, ಹುಡುಗಿ ತಾಯಿಗೆ ಚಾಕು ಇರಿದು ಪರಾರಿಯಾಗಿದ್ದ. ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ತಿಳಿಸಿದರು.

ಮಹಾಲಕ್ಷ್ಮಿ ಕೊಲೆ ಪ್ರಕರಣ; ಪೊಲೀಸರಿಗೆ ಹೆದರಿ ಆರೋಪಿ ಆತ್ಮಹತ್ಯೆ!

Bengaluru murder

ಬೆಂಗಳೂರು: ರಾಜಧಾನಿಯನ್ನು ಬೆಚ್ಚಿ ಬೀಳಿಸಿದ್ದ ನೇಪಾಳ ಮೂಲದ ಮಹಾಲಕ್ಷ್ಮಿ ಕೊಲೆ ಪ್ರಕರಣದ (Bengaluru murder) ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ನಾಪತ್ತೆಯಾಗಿರುವ ಆರೋಪಿ, ಪೊಲೀಸರಿಗೆ ಹೆದರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮಹಾಲಕ್ಷ್ಮಿ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ನಡುವೆ ಕಠಿಣ ಶಿಕ್ಷೆ ಭಯದಿಂದ ಆರೋಪಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮಹಾಲಕ್ಷ್ಮಿಯನ್ನು ಕೊಂದು, ದೇಹವನ್ನು 50ಕ್ಕೂ ಹೆಚ್ಚು ತುಂಡು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದ. ಆತ ಪಶ್ಚಿಮ ಬಂಗಾಳದಲ್ಲಿ ಇದ್ದಾನೆ ಎಂದು ಪೊಲೀಸರು ತೆರಳಿದ್ದರು. ಆದರೆ, ಇದೀಗ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದ ಸ್ವಗ್ರಾಮದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನೂ ಓದಿ | Muda Case: ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಈತ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವೈಯಾಲಿಕಾವಲ್ ಠಾಣೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಶೇಖರ್‌ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.