ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ (Road Accident) ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ನಡೆದಿದೆ. ಅವಲಗುರ್ಕಿ ಗ್ರಾಮದ ನಿತೀಶ್ (18), ನಿತಿನ್ (17) ಹಾಗೂ ವೈಭವ್ (16) ಮೃತರು. ಟ್ಯೂಷನ್ ಮುಗಿಸಿಕೊಂಡು ಬೈಕ್‌ನಲ್ಲಿ ಮೂವರು ವಿದ್ಯಾರ‍್ಥಿಗಳು ಮನೆಗೆ ವಾಪಸ್ ಹೋಗುತ್ತಿದ್ದಾಗ ದುರಂತ ನಡೆದಿದೆ.
ಬಿಜಿಎಸ್ ಕಾಲೇಜಿನಲ್ಲಿ ನಿತೀಶ್ ಹಾಗೂ ನಿತಿನ್ ಪಿಯುಸಿ ವ್ಯಾಸಂಗ ಮಾಡುತ್ತಿದ್ದರೆ, ವೈಭವ್ ಗುಡ್ ಶೆಫರ್ಡ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಅಪಘಾತ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Bengaluru murder: ಮಹಾಲಕ್ಷ್ಮಿ ಕೊಲೆ ಪ್ರಕರಣ; ಪೊಲೀಸರಿಗೆ ಹೆದರಿ ಆರೋಪಿ ಆತ್ಮಹತ್ಯೆ!
ಪ್ರೀತಿಸುತ್ತಿದ್ದ ಹುಡುಗಿಯ ತಾಯಿಗೇ ಚಾಕು ಇರಿದ ಪಾಗಲ್ ಪ್ರೇಮಿ!
ಹುಬ್ಬಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತ ಹುಡುಗಿಯ ಹಿಂದ ಬಿದ್ದ ಪಾಗಲ್ ಪ್ರೇಮಿಯೊಬ್ಬ, ತಾನು ಪ್ರೀತಿಸುತ್ತಿದ್ದ ಹುಡುಗಿಯ ತಾಯಿಗೇ ಚಾಕು ಇರಿದ ಘಟನೆ ನಗರದ ಲೋಹಿಯಾ ನಗರದಲ್ಲಿ ನಡೆದಿದೆ. ಮಹೇಶ್ (24) ಎಂಬಾತನೇ ನೀಲಾ ಹಂಪಣ್ಣವರ್ ಎಂಬಾತ ಆರೋಪಿಯಾಗಿದ್ದಾನೆ. ಇನ್ನು ಘಟನೆ (Stabbing incident) ನಡೆದ ಕೆಲವೊತ್ತಿನಲ್ಲೇ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
ನೀಲಾ ಹಂಪಣ್ಣನವರ ಗಾಯಾಳು. ಸಂಜೆ 4 ಗಂಟೆಯ ಸುಮಾರಿಗೆ ಆರೋಪಿ ಮಹೇಶ, ಮಹಿಳೆಗೆ ಹೊಟ್ಟೆ ಭಾಗಕ್ಕೆ ಚಾಕು ಇರಿದು ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಗಾಯಾಳು ಹಾಗೂ ಆಕೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಕೆಲವೊತ್ತಿನಲ್ಲಿ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಗುಂಡು ತಿಂದಿರುವ ಆರೋಪಿ ಹಾಗೂ ಗಾಯಾಳು ಅಧಿಕಾರಿಯನ್ನು ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಮಹೇಶನನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Donald Trump: ಇರಾನ್‌ನಿಂದ ನನ್ನ ಹತ್ಯೆಗೆ ಸಂಚು- ಡೆಡ್ಲಿ ಅಟ್ಯಾಕ್ ಬಗ್ಗೆ ಮೌನ ಮುರಿದ ಟ್ರಂಪ್
ಗಾಯಗೊಂಡಿರುವ ನೀಲಾ ಅವರ ಮಗಳಿಗೆ ಆರೋಪಿ ಮಹೇಶ್ ಮದುವೆಯಾಗು, ಲವ್ ಮಾಡು ಎಂದು ಐದು ವರ್ಷದಿಂದ ಬಲವಂತ ಮಾಡುತ್ತಿದ್ದ. ಬುಧವಾರ ಏಕಾಏಕಿ ಬಂದು, ಹುಡುಗಿ ತಾಯಿಗೆ ಚಾಕು ಇರಿದು ಪರಾರಿಯಾಗಿದ್ದ. ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ತಿಳಿಸಿದರು.