Tuesday, 3rd December 2024

Road Accident: ಕ್ಯಾಂಟರ್‌ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

road accident

ಬಾಗಲಕೋಟೆ: ಬಾಗಲಕೋಟೆ (Bagalakote News) ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನುಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಮುದ್ದೇಬಿಹಾಳದ ಕಡೆ ಹೊರಟಿದ್ದ ಕಾರು ಬೆಳಗಿನ ಜಾವ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ದೆ ಮಂಪರಿನಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕ್ಯಾಂಟರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಲಕ್ಷ್ಮಣ ವಡ್ಡರ್ (55), ಬೈಲಪ್ಪ ಬಿರಾದಾರ್ (45),ರಾಮಣ್ಣ ನಾಯಕ(50), ಕಾರು ಚಾಲಕ ರಫೀಕ್ ಮುಲ್ಲಾ (25) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರಾಕ್ಟರ್‌ಗೆ ಬೈಕ್‌ ಡಿಕ್ಕಿ, ಮೂವರು ವಿದ್ಯಾರ್ಥಿಗಳು ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapura news) ತಾಲೂಕಿನ ಗೇರಹಳ್ಳಿ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ.

ನಿತೀಶ್(17), ನಿತಿನ್(17) ಹಾಗೂ ವೈಭವ್ ಮೃತರು. ಇವರು ಶಾಲೆ ಹಾಗೂ ಕಾಲೇಜಿನಿಂದ ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ವಿದ್ಯಾರ್ಥಿಗಳು ಅಪಘಾತಕ್ಕೆ ತುತ್ತಾಗಿದ್ದಾರೆ. ಟ್ಯೂಷನ್ ಮುಗಿಸಿಕೊಂಡು ಮೂವರು ಒಂದೇ ಬೈಕಿನಲ್ಲಿ ತೆರಳುತ್ತಿದ್ದರು.

ಬಿಜಿಎಸ್ ಶಾಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ನಿತಿಶ್ ಮತ್ತು ಹಾಗೂ ನಿತಿನ್. ಬಿಜಿಎಸ್ ಕಾಲೇಜಿನಲ್ಲಿ ಓದುತ್ತಿದ್ದರು. ಮತ್ತೊಬ್ಬ ವಿದ್ಯಾರ್ಥಿ ವೈಭವ ಗುಡ್ ಶೆಫರ್ಡ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದರು. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Accident News : ಟ್ರಕ್, ಆಟೋ ನಡುವೆ ಅಪಘಾತ, ಏಳು ಮಂದಿ ಸಾವು