Wednesday, 23rd October 2024

Dasara invitation: ದಸರಾ ಮಹೋತ್ಸವ-2024 ರ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯಪಾಲರಿಗೆ ಅಧಿಕೃತ ಆಹ್ವಾನ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ(Mysore Dasara) ಮಹೋತ್ಸವ-2024 ರ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Governor Thawar Chand Gehlot) ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲು ರಾಜಭವನಕ್ಕೆ ತೆರಳಿ ಅಲ್ಲಿ ಅವರಿಗೆ ನಾಡ ಹಬ್ಬಕ್ಕೆ ಆಹ್ವಾನಿಸಿದರು.

ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ. ಮಹದೇವಪ್ಪ(H C Mahadevappa) ನವರ ಬೆಂಗಳೂರಿನ ಅವರ ಸ್ವಗೃಹಕ್ಕೆ ತೆರಳಿ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ ಅವರು ಮೈಸೂರು ದಸರಾಗೆ ಗೌರವಪೂರ್ವಕವಾಗಿ ಅಧಿಕೃತವಾಗಿ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳಾದ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ ಪಿ. ಶಿವರಾಜು ಹಾಗೂ ಸ್ವಾಗತ ಸಮಿತಿಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Mysuru Dasara 2024: ಮೈಸೂರು ದಸರಾ ನೋಡಲು ಹೋದಾಗ ಈ ಸ್ಥಳಗಳಿಗೆ ತಪ್ಪದೇ ಭೇಟಿ ನೀಡಿ!