ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿದ ಅಧಿಕಾರಿಗಳನ್ನು (Revenue Department Award, Best Revenue Officer Award) ಗುರುತಿಸಿ ಪ್ರತಿವರ್ಷ ಪ್ರಶಸ್ತಿ ನೀಡಲಾಗುತ್ತಿದ್ದು, ಈ ವರ್ಷದ ಅತ್ಯುತ್ತಮ ಸೇವಾದಾತರನ್ನು ಗುರುತಿಸಲಾಗಿದೆ.
ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರರುಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024”
ಪ್ರಶಸ್ತಿಯನ್ನು ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ದಿನಾಂಕ: 27.09.2024ರಂದು ಬೆಳಿಗ್ಗೆ 10 ಗಂಟೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧದ ಕೊಠಡಿ ಸಂಖ್ಯೆ 419ರಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಪ್ರ ಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ. ಈ ಕೆಳಕಂಡ ಅಧಿಕಾರಿಗಳನ್ನು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶಿಸಿದೆ.
ಕಂದಾಯ ಇಲಾಖೆಯ 2023-24 ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿ: