Friday, 22nd November 2024

Hassan News: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hassan News

ಹಾಸನ: ಹಲ್ಲಿ ಬಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಪ್ರೌಢಶಾಲೆಯ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದು ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕೋಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ (Hassan News) ಸ್ಥಳಾಂತರಿಸಲಾಗಿದೆ.

ಬಿಸಿಯೂಟ ಸೇವಿಸಿದ ಬಳಿಕ ವಾಂತಿ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಹೀಗಾಗಿ ವಿದ್ಯಾರ್ಥಿಗಳನ್ನು ಶಿಕ್ಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುರಕ್ಷತಾ ಕ್ರಮ ವಹಿಸಿದ ಶಾಲಾ ಶಿಕ್ಷಕರ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಕುರಿತಂತೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Bengaluru Woman Murder: ಮಹಾಲಕ್ಷ್ಮಿ ಕೊಲೆಪಾತಕಿಯ ಡೆತ್‌ನೋಟ್‌ ಪತ್ತೆ; ಬರ್ಬರ ಕೃತ್ಯದ ಉಲ್ಲೇಖ

ಕ್ಯಾಂಟರ್‌ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಬಾಗಲಕೋಟೆ (Bagalakote News) ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನುಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಮುದ್ದೇಬಿಹಾಳದ ಕಡೆ ಹೊರಟಿದ್ದ ಕಾರು ಬೆಳಗಿನ ಜಾವ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ದೆ ಮಂಪರಿನಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕ್ಯಾಂಟರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಲಕ್ಷ್ಮಣ ವಡ್ಡರ್ (55), ಬೈಲಪ್ಪ ಬಿರಾದಾರ್ (45),ರಾಮಣ್ಣ ನಾಯಕ(50), ಕಾರು ಚಾಲಕ ರಫೀಕ್ ಮುಲ್ಲಾ (25) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.