ಬೆಂಗಳೂರು: ಸೆ. 27ರಂದು ಕರಾವಳಿಯ ಹಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಸೆ.28ರಂದು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಸೆ.29ರಂದು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಇನ್ನು ಸೆ. 30ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಅ.1ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅ. 2ರಂದು ರಾಜ್ಯದ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Healthy Breakfast: ಬೆಳಗಿನ ಉಪಾಹಾರಕ್ಕೆ ಈ 4 ಆಹಾರ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ಆಗಿರಬಹುದು.