ಬೆಂಗಳೂರು: ಮುಂದಿನ ವರ್ಷದಿಂದ ಪದವಿ ಕ್ಲಾಸುಗಳಲ್ಲಿ (Undergraduate) ಪ್ರವೇಶ ಪಡೆಯುವುದಕ್ಕೂ ಕಾಮನ್ ಎಂಟ್ರೆನ್ಸ್ ಟೆಸ್ಟ್ (Common Entrance test) ಬರೆಯಬೇಕಾಗಲಿದೆ. ಆದರೆ ಇದು ಎಲ್ಲರಿಗೂ ಅಲ್ಲ. ಪ್ರತಿಷ್ಠಿತ ಕಾಲೇಜು ಹಾಗೂ ಯುನಿವರ್ಸಿಟಿಗಳಲ್ಲಿ ಸರ್ಕಾರದಿಂದ ಮೀಸಲಾದ ಕೋಟಾದ ಸೀಟುಗಳನ್ನು (Karnataka CET) ಪಡೆಯಬಯಸಿರುವವರಿಗೆ.
ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಸೀಟ್‌ಗಾಗಿ ನಡೆಯುವ ನೀಟ್ ಪರೀಕ್ಷೆಯಂತೆ ಪದವಿ ಕೋರ್ಟ್‌ಗಳಿಗೂ ಸೀಟ್ ಹಂಚಿಕೆಗೆ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ಇನ್ನು ಮುಂದೆ 40% ಸರ್ಕಾರಿ ಕೋಟಾದಡಿಯಲ್ಲಿ ಪದವಿ ಸೀಟುಗಳನ್ನು ಸರ್ಕಾರಕ್ಕೆ ಪಡೆಯಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಸೀಟುಗಳಿಗಾಗಿ ಸಿಇಟಿ ನಡೆಸಲಾಗುತ್ತದೆ.
ಹೀಗಾಗಿ, ಪಿಯುಸಿ ಬಳಿಕ ಪದವಿ ಶಿಕ್ಷಣದ ಕನಸು ಕಾಣುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿಯೂ ಸರ್ಕಾರಿ ಕೋಟಾದ ಪದವಿ ಸೀಟ್ ಗಳು ಸಿಗಲಿದೆ. ಈ ಹಿಂದೆ ಖಾಸಗಿ ಪದವಿ ಕಾಲೇಜುಗಳು 100 ಕ್ಕೆ 100 ಮ್ಯಾನೇಜಮೆಂಟ್ ಕೋಟಾದಡಿ ಸೀಟ್ ನೀಡಿ ಪದವಿ ದಾಖಲಾತಿ ಪಡೆಯುತ್ತಿದ್ದರು. ಪ್ರತಿಷ್ಠಿತ ಖಾಸಗಿ ಕಾಲೇಜುಗಳ ಭಾರಿ ಶುಲ್ಕದಿಂದಾಗಿ ಇಲ್ಲಿ ಓದಲು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಸರ್ಕಾರ ಪದವಿ ಖಾಸಗಿ ಕಾಲೇಜುಗಳಲ್ಲಿ ಕಾನೂನಾತ್ಮಕವಾಗಿ ಬರಬೇಕಾದ 40% ಸರ್ಕಾರಿ ಕೋಟಾದ ಸೀಟುಗಳನ್ನು ಈ ವರ್ಷದಿಂದ ಪಡೆಯಲು ಮುಂದಾಗಿದೆ. ಈ ಸೀಟುಗಳ ಹಂಚಿಕೆಗೆ ಮುಂದಿನ ವರ್ಷದಿಂದ ಎಲ್ಲ ವಿವಿಗಳ ಪದವಿ ಕೋರ್ಟ್‌ಗೆ ಹಾಗೂ ಪಿಜಿ ಕೋರ್ಸ್‌ಗೆ CET ಪರೀಕ್ಷೆ ನಡೆಸಲು ಮುಂದಾಗಿದೆ.
ಈಗಾಗಲೇ 17 ಖಾಸಗಿ ವಿಶ್ವವಿದ್ಯಾಲಯಗಳಿಂದ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬಹುತೇಕ ಖಾಸಗಿ ವಿವಿಗಳು ಈಗಾಗಲೇ CET ಪರೀಕ್ಷೆ ನಡೆಸಲು ಒಪ್ಪಿಕೊಂಡಿವೆ. 2024-25 ನೇ ಸಾಲಿನ ಪದವಿ ಕೋರ್ಸ್‌ಗಳ ದಾಖಲಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಸರ್ಕಾರಿ ಹಾಗೂ ಖಾಸಗಿ ವಿವಿಗಳಲ್ಲಿನ ಸೀಟ್ ಹಂಚಿಕೆಗೆ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದ. ಎಲ್ಲ ವಿವಿಗಳ ನಡುವೆ ಕಾಮನ್ ಎಂಟ್ರೆನ್ಸ್ ಪರೀಕ್ಷೆ ನಡೆಸಿ 2025-26 ರಿಂದ ಖಾಸಗಿ ವಿವಿಗಳಲ್ಲಿಯೂ ಸೀಟ್ ಹಂಚಿಕೆ ಮಾಡಲಿದೆ.
ಕೆಇಎ ಅಥವಾ ಕಾಮೆಡ್ ಕೆ ಮಾದರಿಯಲ್ಲಿ ಪರೀಕ್ಷೆ ಅಥವಾ ಆಯ್ಕೆ ಪ್ರಕ್ರಿಯೆ ನಡೆಸಿ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಲ್ಲಿ ಪದವಿ ಕೋರ್ಸ್ ಸೀಟುಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಖಾಸಗಿ ಕಾಲೇಜುಗಳಲ್ಲಿ ಓದಬೇಕೆಂಬ ಕನಸು ಕಂಡಿರುವ ಹಾಗೂ ಸರ್ಕಾರಿ ಕಾಲೇಜುಗಳಿಲ್ಲದ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.
ಇದನ್ನೂ ಓದಿ: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಿಇಟಿ ೨೦೨೪ ಪರೀಕ್ಷೆ