ಬೆಂಗಳೂರು : ಮಹಿಳೆಯರಿಗೆ ಕಿರುಕುಳ ನೀಡುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ನಡೆಯುತ್ತಿವೆ. ಬಸ್ಸಿನಲ್ಲಿ ಅಥವಾ ರೈಲಿನಲ್ಲಿ ಪ್ರಯಾಣಿಸುವಾಗ, ಮತ್ತು ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಹೋದಾಗ, ಪಾರ್ಕ್, ಕಾಲೇಜು ಹೀಗೆ ಹಲವಾರು ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಈ ಕಿರುಕುಳ ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ತುಳಸಿ ಎಕ್ಸ್‌ಪ್ರೆಸ್‌ನಲ್ಲಿ ಕೂಡ ಹುಡುಗಿಯರಿಗೆ ಹೋಮ್‌ಗಾರ್ಡ್ ಒಬ್ಬ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video)ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.
ವರದಿಗಳ ಪ್ರಕಾರ, ತುಳಸಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹೋಮ್‌ಗಾರ್ಡ್ ಶುಕ್ಲಾ ರೈಲಿನಲ್ಲಿ ಹುಡುಗಿಯರನ್ನು ಸಂಪರ್ಕಿಸಿ, ಅವರ ಫೋನ್ ನಂಬರ್‌ಗಳನ್ನು ಕೇಳಿದ್ದಾನೆ. ಅವರು ಕೊಡಲು ನಿರಾಕರಿಸಿದಾಗ, ಅವನು ಅವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಘಟನೆಯನ್ನು ಪ್ರಯಾಣಿಕರೊಬ್ಬರು ವಿಡಿಯೊ ಮಾಡಿ ನಂತರ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದು, ಇದು ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೊದಲ್ಲಿ, ಶುಕ್ಲಾ ಅನುಚಿತವಾಗಿ ವರ್ತಿಸುತ್ತಿದ್ದಾನೆ. ಆರೋಪಿ ಹೋಮ್‌ಗಾರ್ಡ್ ವಿರುದ್ಧ ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಮಹಿಳಾ ಹಕ್ಕುಗಳ ಆಯೋಗಗಳು ಈಗ ಒತ್ತಾಯಿಸುತ್ತಿವೆ.
चित्रकूट से प्रयागराज जा रही तुलसी एक्सप्रेस में होमगार्ड शिवदत्त शुक्ला द्वारा युवतियों से नंबर मांगने और विरोध करने पर अपशब्द बोलने का मामला। घटना का वीडियो सोशल मीडिया पर तेजी से वायरल हो रहा है। उचित कार्रवाई की मांग।
— Journalist R.K. Nishad (@darshak_24) September 25, 2024
#TulsiExpress #ViralVideo #SafetyForWomen… pic.twitter.com/zUXjfzTWY8
ಸೋಶಿಯಲ್ ಮೀಡಿಯಾ ಬಳಕೆದಾರರು ಶಿವದತ್ ಶುಕ್ಲಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ, ವಿಶೇಷವಾಗಿ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಅನೇಕರು ಕಳವಳ ವ್ಯಕ್ತಪಡಿಸಿದ್ದಾರೆ. ರೈಲಿನಲ್ಲಿ ಹೆಚ್ಚು ಕಿರುಕುಳದ ಘಟನೆಗಳು ವರದಿಯಾಗುತ್ತಿದೆ ಎಂದು ದೂರಿದ್ದಾರೆ.
ಈ ವೈರಲ್ ವಿಡಿಯೊಗೆ ಪ್ರತಿಕ್ರಿಯಿಸಿದ ಸ್ಥಳೀಯ ಅಧಿಕಾರಿಗಳು ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಆದರೆ ಶುಕ್ಲಾ ಅವರನ್ನು ತಕ್ಷಣ ಅಮಾನತುಗೊಳಿಸಲು ಮತ್ತು ಕಾನೂನು ಕ್ರಮಕ್ಕಾಗಿ ಸಾರ್ವಜನಿಕ ಒತ್ತಡ ಹಾಕುತ್ತಲೇ ಇದ್ದಾರೆ.
ಇದನ್ನೂ ಓದಿ:ವಿಶ್ವದ ಅತ್ಯಂತ ದುಬಾರಿ ಕಾಂಡೋಮ್ ಇದು! ಇದರ ದರ ಎಷ್ಟಿರಬಹುದು ಊಹಿಸಿ!
ಈ ಪ್ರಕರಣವು ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಈ ಘಟನೆಯಿಂದ ಮಹಿಳೆಯರನ್ನು ಕಿರುಕುಳದಿಂದ ರಕ್ಷಿಸಲು ಕಠಿಣ ಕ್ರಮಗಳ ಅಗತ್ಯತೆ ಮತ್ತು ತ್ವರಿತ ನ್ಯಾಯದ ಪ್ರಾಮುಖ್ಯತೆಯ ಬಗ್ಗೆ ಚರ್ಚೆಗಳು ಹೆಚ್ಚಾಗುತ್ತಿದೆ ಎನ್ನಲಾಗಿದೆ.