Friday, 27th September 2024

T D Rajegowda: ಚುನಾವಣಾ ತಕರಾರು ಅರ್ಜಿ; ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ

T D Rajegowda

ಚಿಕ್ಕಮಗಳೂರು: ಚುನಾವಣಾ ತಕರಾರರು ಅರ್ಜಿ ಸಂಬಂಧ ಶೃಂಗೇರಿ ಕಾಂಗ್ರೆಸ್‌ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸರ್ವೋಚ್ಚ ನ್ಯಾಯಾಲದಲ್ಲೂ ಹಿನ್ನಡೆ ಉಂಟಾಗಿದೆ. ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಮಾಜಿ ಶಾಸಕ ಜೀವರಾಜ್‌ ಹೈಕೋರ್ಟ್‌ಗೆ ಈ ಹಿಂದೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿ ರದ್ದು ಕೋರಿ ಟಿ.ಡಿ. ರಾಜೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಶಾಸಕರಿಗೆ (T D Rajegowda) ಇದೀಗ ಹಿನ್ನಡೆಯಾಗಿದೆ.

ಶೃಂಗೇರಿ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಶಾಸಕ ಟಿ.ಡಿ. ರಾಜೇಗೌಡ ಅಕ್ರಮವಾಗಿ ಗೆಲುವು ಸಾಧಿಸಿದ್ದಾರೆ. ಕೇವಲ 200 ಮತಗಳ ಅಂತರದಲ್ಲಿ ಗೆದ್ದಿದ್ದು, ಮತದಾನ ಎಣಿಕೆಯಲ್ಲಿ ಅಧಿಕಾರಿಗಳೂ ತಪ್ಪು ಮಾಡಿದ್ದಾರೆ. ಹೀಗಾಗಿ ಹೀಗಾಗಿ ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಮಾಜಿ ಶಾಸಕ ಜೀವರಾಜ್‌ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಜೀವರಾಜ್ ಸಲ್ಲಿಸಿದ್ದ ಚುನಾವಣೆ ತಕರಾರು ಅರ್ಜಿಯನ್ನು ಅಮಾನ್ಯ ಮಾಡಬೇಕೆಂದು ರಾಜೇಗೌಡ ಕೋರಿದ್ದ ಅರ್ಜಿ ಈ ಹಿಂದೆ ವಜಾಗೊಂಡಿತ್ತು. ಅದನ್ನು ಪ್ರಶ್ನಿಸಿ ರಾಜೇಗೌಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಅಂಚೆ ಮತಗಳ ತಿರಸ್ಕಾರ ಕಾನೂನು ಬಾಹಿರ ಎಂಬ ಜೀವರಾಜ್ ವಾದ ಸಮ್ಮತವಾದದ್ದು ಮತ್ತು ಚುನಾವಣಾ ಅಕ್ರಮ ಕುರಿತಾದ ಜೀವರಾಜ್‌ ಅವರ ವಾದ ಆಲಿಸಿದ ನಂತರ ಹೈಕೋರ್ಟ್‌ ತೀರ್ಪು ನೀಡಬೇಕು ಎಂದು ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Actor Darshan: ಬಳ್ಳಾರಿ ಜೈಲಿನಲ್ಲಿ ಐಟಿ ಇಲಾಖೆ ಅಧಿಕಾರಿಗಳಿಂದ ದರ್ಶನ್‌ ವಿಚಾರಣೆ

ಇದರಿಂದಾಗಿ ರಾಜೇಗೌಡ ವಿರುದ್ಧದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಯಲಿದ್ದು, ರಾಜೇಗೌಡ ಅದನ್ನು ಎದುರಿಸಬೇಕಾಗಿದೆ. ರಾಜೇಗೌಡ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ಸಂಜಯ್ ನುಲಿ ವಾದಿಸಿದರು, ಜೀವರಾಜ್ ಪರ ಹಿರಿಯ ವಕೀಲರಾದ ಮೀನಾಕ್ಷಿ ಅರೋರ ಮತ್ತು ಎಂ.ಎಸ್. ಶ್ಯಾಂಸುಂದರ್ ವಾದಿಸಿದರು.

ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ತಡೆ: ಕರ್ನಾಟಕ ಸಚಿವ ಸಂಪುಟ ನಿರ್ಣಯ

ಬೆಂಗಳೂರು: ರಾಜ್ಯದಲ್ಲಿ ಪ್ರಕರಣಗಳನ್ನು ತನಿಖೆ ಮಾಡಲು ಕೇಂದ್ರೀಯ ತನಿಖಾ ದಳಕ್ಕೆ (CBI Probe) ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಕರ್ನಾಟಕ ಸರ್ಕಾರ (Karnataka Government) ರದ್ದುಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸಂಪುಟ ಸಭೆಯ (Karnataka Cabinet) ನಂತರ ಗುರುವಾರ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.

ಸಿಬಿಐ ಪಕ್ಷಪಾತ ಮಾಡುತ್ತಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ಪ್ರತಿಪಕ್ಷ ಬಿಜೆಪಿಯಿಂದ ಹೆಚ್ಚುತ್ತಿರುವ ಬೇಡಿಕೆಗಳ ನಡುವೆಯೇ ಈ ನಿರ್ಣಯ ಬಂದಿದೆ.

ಸಿಬಿಐ ತನಿಖೆಗೆ ಒಪ್ಪಿಗೆ ಹಿಂತೆಗೆತಕ್ಕೂ ಹಾಗೂ ಮುಡಾ ಹಗರಣ ತನಿಖೆಗೂ ಸಂಬಂಧವಿದೆ ಎಂಬ ಆರೋಪವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಳ್ಳಿಹಾಕಿದ್ದಾರೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆಯಡಿ ಸಿಬಿಐನ ಒಪ್ಪಿಗೆಯನ್ನು ಹಿಂಪಡೆಯಲಾಗಿದೆ ಎಂದು ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಸಿಬಿಐ ಪೂರ್ವಾಗ್ರಹ ಪೀಡಿತವಾಗಿ, ಕೇಂದ್ರ ಸರಕಾರದ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದರಿಂದಾಗಿ, ಭವಿಷ್ಯದ ಯಾವುದೇ ತನಿಖೆಗಳಿಗೆ ಸಿಬಿಐ ಸಂಸ್ಥೆ ಪ್ರಕರಣವಾರು ಅನುಮೋದನೆ ಪಡೆಯುವ ಅಗತ್ಯವಿರುತ್ತದೆ. ಸಿಬಿಐ ತನಿಖೆಗೆ ಸಾಮಾನ್ಯ ಸಮ್ಮತಿಯನ್ನು ಹಿಂತೆಗೆದುಕೊಂಡ ರಾಜ್ಯಗಳಲ್ಲಿ ಇದೀಗ ಕರ್ನಾಟಕವೂ ಸೇರಿದೆ. ಈ ಹಿಂದೆ ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ಸೇರಿದಂತೆ ಹಲವು ಬಿಜೆಪಿಯೇತರ ಆಡಳಿತದ ರಾಜ್ಯಗಳು ಸಮ್ಮತಿ ಮರಳಿ ಪಡೆದಿವೆ.

ಗಣಿ ತನಿಖೆಗಳು ಸೇರಿದಂತೆ ಹಿಂದಿನ ಹಲವು ಪ್ರಕರಣಗಳನ್ನು ಸಿಬಿಐ ನಿರ್ವಹಿಸಿದ ರೀತಿ ಸರಿಯಾಗಿಲ್ಲ. ಆರೋಪಪಟ್ಟಿ ಸಲ್ಲಿಸಲು ಸಂಸ್ಥೆ ವಿಫಲವಾಗಿದೆ. ಇದು ಬಿಜೆಪಿ ನಿರ್ದೇಶನದಂತೆ ಕಾರ್ಯ ನಿರ್ವಹಿಸುತ್ತಿದೆ ಎಂದು ಪಾಟೀಲ್‌ ಹೇಳಿದ್ದಾರೆ. ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವಿಲ್ಲ. ಪ್ರತಿಪಕ್ಷಗಳು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Murder case: ಗಂಡನಿಗೆ ನಿದ್ರೆ ಮಾತ್ರೆ ಹಾಕಿ ಪರಸಂಗ, ಪ್ರಿಯತಮನ ಜೊತೆ ಸೇರಿ ಕೊಲೆ

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಆರೋಪಗಳ ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದ ನಂತರ ನ್ಯಾಯಾಲಯದ ಆದೇಶ ಬಂದಿದೆ.