Friday, 22nd November 2024

MP Accident: ಬಸ್‌-ಟ್ರಕ್‌ ಭೀಕರ ಅಪಘಾತ; 10 ಮಂದಿ ಸ್ಥಳದಲ್ಲೇ ದುರ್ಮರಣ

MP Accident

ಭೋಪಾಲ್‌: ಮಧ್ಯಪ್ರದೇಶ(MP Accident)ದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬರೋಬ್ಬರಿ 10 ಜನ ದುರ್ಮರಣಕ್ಕೀಡಾಗಿದ್ದಾರೆ. ಶನಿವಾರ ರಾತ್ರಿ ಮೈಹಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 30 ರಲ್ಲಿ ಹೈವಾ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು ಹತ್ತು ಜನರು ಸಾವನ್ನಪ್ಪಿದ್ದು, 24 ಮಂದಿಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಮೃತಪಟ್ಟವರು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಉತ್ತರ ಪ್ರದೇಶದ ಖಾಸಗಿ ಟ್ರಾವೆಲ್ ಏಜೆನ್ಸಿಯ ಸ್ಲೀಪರ್ ಕೋಚ್ ಬಸ್ ಶನಿವಾರ ರಾತ್ರಿ ಪ್ರಯಾಗರಾಜ್‌ನಿಂದ ನಾಗ್ಪುರಕ್ಕೆ ಪ್ರಯಾಣ ಬೆಳೆಸಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹೈವಾ ಟ್ರಕ್‌ನ ಚಾಲಕ ಇದ್ದಕ್ಕಿದ್ದಂತೆ ಟ್ರಕ್‌ನ ವೇಗವನ್ನು ಕಡಿಮೆ ಮಾಡಿ ಏಕಾಏಕಿ ಬ್ರೇಕ್‌ ಹೊಡೆದಿದ್ದಾನೆ. ಆಗ ಹಿಂಬದಿಯಿಂದ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದ್ದಾನೆ.

ಸತ್ನಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸುಧೀರ್ ಅಗರವಾಲ್, “ಭೀಕರ ಡಿಕ್ಕಿಯಿಂದಾಗಿ ಬಸ್ ಟ್ರಕ್‌ನಲ್ಲಿ ಸಿಲುಕಿಕೊಂಡಿದೆ. ಬಸ್ಸಿನೊಳಗೆ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸಲು ಜೆಸಿಬಿ ಮತ್ತು ಕಟರ್‌ಗಳನ್ನು ಬಳಸಲಾಗುತ್ತಿದೆ. ಐವರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇನ್ನು ಗಾಯಾಳು 29 ಮಂದಿಯನ್ನು ಸಾತ್ನಾ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಐವರು ಮೃತಪಟ್ಟಿದ್ದಾರೆ. ಇಬ್ಬರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.

ಮುಖ್ಯಮಂತ್ರಿ ಮೋಹನ್ ಯಾದವ್ ಘಟನೆಗೆ ಸಂತಾಪ ಸೂಚಿಸಿದ್ದು, ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಟ್ರಕ್ ಮತ್ತು ಪ್ರಯಾಣಿಕರ ಬಸ್ ನಡುವೆ ಭೀಕರ ಡಿಕ್ಕಿಯಿಂದ 10 ಪ್ರಯಾಣಿಕರಿ ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಸಂಗತಿ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದ್ದು, ಮೃತರ ಕುಟುಂಬ ಸದಸ್ಯರಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು ಎಂದರು.

ಈ ಸುದ್ದಿಯನ್ನೂ ಓದಿ: Fire Accident: ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್‌ ಘಟಕದಲ್ಲಿ ಭಾರಿ ಬೆಂಕಿ ಅವಘಡ