Sunday, 29th September 2024

Tirupati Laddu Row : ತಿರುಪತಿ ಲಡ್ಡು ಅಪವಿತ್ರ; ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ

Tirupati laddu Row

ಬೆಂಗಳೂರು : ಜಗತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಭಕ್ತಿಯ ಸ್ಥಾನವಾಗಿರುವ ತಿರುಪತಿ ಬಾಲಾಜಿ ದೇವಸ್ಥಾನದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು (Tirupati Laddu Row) ಬಳಸಿದ್ದು ಅತ್ಯಂತ ಗಂಭೀರ ವಿಷಯ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇವರು ಬಹಿರಂಗಪಡಿಸಿದ ನಂತರ ಜಗತ್ತಿನಲ್ಲಿನ ಹಿಂದೂ ಜನಾಂಗದಲ್ಲಿ ತೀವ್ರ ಆಕ್ರೋಶದ ಅಲೆ ಭುಗಿಲೆದ್ದಿದೆ. ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಸೇರಿಸುವುದು, ಇದು ಕೇವಲ ಕಲಬೆರಿಕೆ ಅಲ್ಲದೆ ಹಿಂದೂಗಳ ಧರ್ಮಶ್ರದ್ಧೆಯ ಮೇಲೆ ಪ್ರಯತ್ನ ಪೂರ್ವಕವಾಗಿ ಮಾಡಿರುವ ಧಾರ್ಮಿಕ ಆಘಾತ ಎಂದು ಹಿಂದೂ ಜನಜಾಗೃತಿ ಸಮಿತಿಯ ಬೆಂಗಳೂರು ಜಿಲ್ಲೆಯ ಸಮನ್ವಯಕರಾದ ಶರತ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬೆರೆಸಿದ ಘಟನೆಯನ್ನು ವಿರೋಧಿಸಿದ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಆಂಧ್ರದ ಹಿಂದಿನ ಮುಖ್ಯಮಂತ್ರಿ ಜಗನ್ ರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದು ಹಿಂದೂಗಳಿಗೆ ಮಾಡಿರುವ ವಿಶ್ವಾಸ ಘಾತವೇ ಆಗಿದೆ. ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ತಂದೆ ಸ್ಯಾಮ್ಯುಯೆಲ್ ರಾಜಶೇಖರ ರೆಡ್ಡಿ ಬಾಲಾಜಿ ದೇವಸ್ಥಾನದ ಪವಿತ್ರ ಲಡ್ಡು ತಯಾರಿಸುವ ಗುತ್ತಿಗೆಯನ್ನು ಕ್ರೈಸ್ತರ ಕಂಪನಿಗೆ ನೀಡಿದ್ದರು. ದೇವಸ್ಥಾನದ ಟ್ರಸ್ಟಿ ಸ್ಥಾನದಲ್ಲಿ ಕ್ರೈಸ್ತರನ್ನು ನೇಮಿಸಿದ್ದರು. ದೇವಸ್ಥಾನ ಪರಿಸರದಲ್ಲಿ ಕ್ರೈಸ್ತ ಮಿಶಿನರಿಗಳ ಮತಾಂತರಕ್ಕೆ ಪ್ರೋತ್ಸಾಹ ನೀಡಿದ್ದರು. ಇದೀಗ ಪ್ರಸಾದದ ಲಡ್ಡುವಿನಲ್ಲಿ ಕೊಬ್ಬು ಸೇರಿಸಿ ಹಿಂದೂಗಳ ಧರ್ಮಭ್ರಷ್ಟ ಮಾಡುವ ಷಡ್ಯಂತ್ರ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Arvind Kejriwal : ತಿಹಾರಿ ಜೈಲಲ್ಲಿ ಟಾರ್ಚರ್ ಕೊಟ್ರು, ಹರಿಯಾಣ ರ್ಯಾಲಿಯಲ್ಲಿ ಕೇಜ್ರಿವಾಲ್‌ ಹೇಳಿಕೆ

ಈ ಮಹಾ ಪಾಪ ಮಾಡಿದವರ ಮೇಲೆ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣದಲ್ಲಿ ದೂರು ದಾಖಲಿಸಿ ಅವರನ್ನು ತಕ್ಷಣ ಬಂಧಿಸಬೇಕು ಎಂದು ಶರತ್ ಕುಮಾರ್ ಇವರು ಆಗ್ರಹಿಸಿದ್ದಾರೆ. ತಿರುಪತಿ ದೇವಸ್ಥಾನಕ್ಕೆ ಸಂಬಂಧಿತ ತೆಗೆದುಕೊಂಡುರುವ ಎಲ್ಲಾ ನಿರ್ಣಯದ ವಿಸ್ತೃತ ವಿಚಾರಣೆ ನಡೆಸಬೇಕು. ಇದರಲ್ಲಿ ಹಿಂದೂ ಧರ್ಮವಿರೋಧಿ ನಿರ್ಣಯ ತೆಗೆದುಕೊಂಡಿದ್ದರೆ ತಕ್ಷಣವೇ ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ವೇಳೆ ರಾಷ್ಟ್ರಧರ್ಮ ಸಂಘಟನೆಯ ಸಂತೋಷ್ ಕೆಂಚಾಂಬ, ರಾಷ್ಟ್ರೀಯ ಅಸಂಘಟಿತ ಪುರೋಹಿತ ಕಾರ್ಮಿಕ ಪರಿಷತ್‌ನ ಕಾರ್ಯದರ್ಶಿಗಳಾದ ಡಾ. ಮಹೇಶ್ ಕುಮಾರ್ ಬಿ.ಎನ್, ಆಜಾದ್ ಬ್ರಿಗೇಡ್‌ನ ಅಧ್ಯಕ್ಷ ಗಜೇಂದ್ರ ಸಿಂಗ್, ರಾಷ್ಟ್ರೀಯ ಹಿಂದೂ ಪರಿಷತ್‌ನ ಉಪಾಧ್ಯಕ್ಷರಾದ ಸುರೇಶ ಗೌಡ, ಹಿಂದೂ ಮುಖಂಡರಾದ ವೆಂಕಟಸ್ವಾಮಿ ರೆಡ್ಡಿ, ಜ್ಯೋತಿ ಗೌಡ ಹಾಗೂ ಹಲವಾರು ಹಿಂದುತ್ವ ನಿಷ್ಠರು, ವೆಂಕಟೇಶ್ವರನ ಭಕ್ತರು ಭಾಗವಹಿಸಿದ್ದರು.