Friday, 13th December 2024

ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿರುವ “ಸ್ವಚ್ಛತಾ ಹಿ ಸೇವಾ” ಕಾರ್ಯ ಕ್ರಮವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಎನ್.ವಿ.ಭವಾನಿ ಅವರು ನ್ಯಾಯಾಲಯದ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನ್ಯಾಯಾಂಗ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ನಗರಸಭೆಯ ಸಹಯೋಗದಲ್ಲಿ ಕೋರ್ಟ್ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಈ ವೇಳೆ ನ್ಯಾಯಾಧೀಶರಾದ ಬಿ.ಶಿಲ್ಪಾ, ಚಿಕ್ಕಬಳ್ಳಾಪುರ ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಆರ್. ಶ್ರೀನಿವಾಸ್ ಹಾಗೂ ವಕೀಲರು ಪಾಲ್ಗೊಂಡಿದ್ದರು.