ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕ ಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಗಾಂಧಿ ಭವನ ಕಟ್ಟಡ ಉದ್ಘಾಟನೆ ಹಾಗೂ ಗಾಂಧಿ ಜಯಂತಿ ಕಾರ್ಯಕ್ರಮ ವನ್ನು ಅ.2 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಗ್ರಂಥಾಲಯ ಹತ್ತಿರ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಎದುರು ಇರುವ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.
ಕರ್ಯಕ್ರಮದ ಘನ ಉಪಸ್ಥಿತಿಯನ್ನು ಸನ್ಮಾನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ. ಪ್ರದೀಪ್ ಈಶ್ವರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತಿನ ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರಸಭೆ ಅಧ್ಯಕ್ಷ ಎ.ಗಜೇಂದ್ರ ರವರು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿ ಕಾರಿಗಳಾದ ಡಾ. ಎನ್. ಮಂಜುಳಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕ ಚಂದ್ರ, ವರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.
*
ಅ.೨ಕ್ಕೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನರ್ಮಿಸಲಾಗುವ ರೇಡಿಯಾಲಜಿ ವಿಭಾಗದ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭ
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ ೨ ರಂದು ಬೆಳ್ಳಿಗೆ ೧೧ ಗಂಟೆಗೆ ಚಿಕ್ಕಬಳ್ಳಾಪುರ ನಗರದ ನೂತನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ “ರ್ನಾಟಕ ಪರೀಕ್ಷಾ ಪ್ರಾಧಿಕಾರ ರವರ ರೂ.೮.೨೦ ಕೋಟಿ ಅನುದಾನದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನರ್ಮಿಸಲಾಗುವ ರೇಡಿಯಾಲಜಿ ವಿಭಾಗದ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭವನ್ನು ಆಯೋಜಿಸಲಾಗಿದೆ.
ನೂತನವಾಗಿ ನರ್ಮಿಸಲಾಗುವ ರೇಡಿಯೋಲಜಿ ಕಟ್ಟಡದಲ್ಲಿ ಸುಸಜ್ಜಿತ ಅತ್ಯಾಧುನಿಕ ಪರೀಕ್ಷಾ ಪ್ರಯೋಗಾಲಯ ಗಳು, ಎಂಆರ್ಐ, ಸಿಟಿ ಸ್ಕ್ಯಾನ್, ಎಕ್ಸರೇ, ಅಲ್ಟಾಸೌಂಡ್ ಸ್ಕ್ಯಾನಿಂಗ್, ಎಕೊ, ಐಎಂಐ ಹಾಗೂ ಎಲ್ಲಾ ರೀತಿಯ ರಕ್ತ ಪರೀಕ್ಷೆಗಳ ಸೌಲಭ್ಯಗಳು ಲಭ್ಯವಿರುತ್ತವೆ.
ಕರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ರವರು ನೆರವೇರಿಸಲಿದ್ದಾರೆ.
ಕರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ. ಪ್ರದೀಪ್ ಈಶ್ವರ್ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವರಾದ ಡಾ. ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತಿನ ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರಸಭೆ ಅಧ್ಯಕ್ಷ ಎ.ಗಜೇಂದ್ರ ರವರು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಕರ್ಮಿಕ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ರ್ಕಾರದ ಕರ್ಯರ್ಶಿಗಳಾದ ಮಹಮ್ಮದ್ ಮೊಹಸೀನ್, ರ್ಕಾರದ ಕರ್ಯರ್ಶಿಗಳು, ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕರ್ಯರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿ ಕಾರಿಗಳಾದ ಡಾ. ಎನ್. ಮಂಜುಳಾ, ವೈದ್ಯಕೀಯ ಶಿಕ್ಷಣ ನರ್ದೇಶನಾಲಯದ ನರ್ದೇಶಕರಾದ ಡಾ. ಬಿ.ಎಲ್. ಸುಜಾತ ರಾಥೋಡ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಘಟಕದ ಮುಖ್ಯ ಇಂಜಿನಿಯರ್ ಬಿ.ಕೆ. ಪವಿತ್ರ, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.