ಬೆಂಗಳೂರು: ಮುಡಾ ಸೈಟುಗಳನ್ನು (MUDA case) ಹಿಂದಿರುಗಿಸುವ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪತ್ನಿಯ ನಿರ್ಧಾರ, ಸಂವಿಧಾನಕ್ಕೆ ಹಾಗೂ ಸಂವಿಧಾನವನ್ನು ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಮುಡಾ ಸೈಟುಗಳನ್ನು (MUDA scam) ವಾಪಸ್ಸು ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು, ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ. ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಅಶೋಕ್ ಹೇಳಿದ್ದಾರೆ.
ಸಿಎಂ @siddaramaiah ನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ 'ದೊಡ್ದ' ಮನಸ್ಸು ಮಾಡಿರುವುದು,
— R. Ashoka (@RAshokaBJP) September 30, 2024
✅ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ.
✅ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ.
✅ ಜಗ್ಗಲ್ಲ, ಬಗ್ಗಲ್ಲ…
ಸೈಟು ಸಾಲದು, ರಾಜೀನಾಮೆ ಕೊಡಲಿ
ಸಿಎಂ ಅವರು ಕೇವಲ ಮುಡಾ ಸೈಟ್ ಅಲ್ಲ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಕೇಂದ್ರ ಸಚಿವ, ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡಿ ಅಂದರೆ ಸೈಟ್ ಕೊಟ್ಟಿದ್ದಾರೆ.
— Pralhad Joshi (@JoshiPralhad) September 30, 2024
ತಡವಾಗಿ ಜ್ಞಾನೋದಯವಾಗಿದೆ. ಕೇವಲ ಮುಡಾ ಸೈಟ್ ಅಲ್ಲ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ.
ತಮ್ಮ ಮೇಲಿನ ಆರೋಪವನ್ನು ಸತತ ಅಲ್ಲಗಳೆಯುತ್ತಾ ಬಂದ ಅವರು ಇಂದು ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡಿದ್ದಾರೆ. https://t.co/xIIz3nzH0y
ಸಿದ್ದರಾಮಯ್ಯ ರಾಜೀನಾಮೆ ಕೊಡಿ ಅಂದರೆ ಸೈಟ್ ಕೊಟ್ಟಿದ್ದಾರೆ. ತಡವಾಗಿ ಜ್ಞಾನೋದಯವಾಗಿದೆ. ಕೇವಲ ಮುಡಾ ಸೈಟ್ ಅಲ್ಲ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ತಮ್ಮ ಮೇಲಿನ ಆರೋಪವನ್ನು ಸತತ ಅಲ್ಲಗಳೆಯುತ್ತಾ ಬಂದ ಅವರು ಇಂದು ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ಜೋಶಿ ಹೇಳಿದ್ದಾರೆ.
ಸೈಟ್ ಹಿಂದಿರುಗಿಸಿದ ಸಿಎಂ ಪತ್ನಿ
ಸಿಎಂ ಪತ್ನಿ ಪಾರ್ವತಿ ಅವರು ಈ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಮನವಿ ಸಲ್ಲಿಸಿದ್ದು, ಭೂಸ್ವಾಧೀನಕ್ಕಾಗಿ ಪಡೆದಿರುವ ಬದಲಿ 14 ನಿವೇಶಗಳನ್ನು ವಾಪಸ್ ನೀಡುವುದಾಗಿ ಬರೆದುಕೊಂಡಿದ್ದಾರೆ. ಮೈಸೂರು ತಾಲೂಕು ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ಸಂಖ್ಯೆ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ಈ ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ಇದೇ ವೇಳೆ ಅವರು ಇನ್ನೊಂದು ಸಾರ್ವಜನಿಕ ಪತ್ರವನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮ್ಮನ್ನು ರಾಜಕೀಯ ದುರುದ್ದೇಶಕ್ಕೆ ಗುರಿಯಾಗಿಸಿಕೊಂಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: MUDA Scam : ಮುಡಾ ಹಗರಣಕ್ಕೆ ನಾಟಕೀಯ ತಿರುವು; 14 ನಿವೇಶನ ವಾಪಸ್ ಮಾಡುವುದಾಗಿ ಸಿದ್ದರಾಮಯ್ಯ ಪತ್ನಿಯ ಘೋಷಣೆ!