ತಿಪಟೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ವಾರದ 06 ದಿನಗಳು ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡುವ ಯೋಜನೆಯನ್ನು ಸದುಪಯೋಗ ಮಾಡಿಕೊಂಡು ರಾಷ್ಟ್ರದ ಸತ್ಪ್ರಜೆಗಳಾಗಬೇಕೆಂದು ಶಾಸಕ ಕೆ.ಷಡಕ್ಷರಿ ಕರೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಷನ್ ಫಾರ್ ಡೆವಲಪ್ಮೆಂಟ್, ಬೆಂಗಳೂರು ರವರ ಆನುದಾನದ ಸಹಭಾಗಿತ್ವದಲ್ಲಿ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ 1 ರಿಂದ 10 ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಯ ಮಕ್ಕಳು ಹಸಿವಿನಿಂದ ಮುಕ್ತವಾಗುವ ಹಾಗೂ ಅಪೌಷ್ಠಿಕತೆ ನಿವಾರಣೆಯ ಉದ್ದೇಶದಿಂದ ಪಿ.ಎಂ ಪೋಷಣ್ ಅಡಿ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮ ಶ್ಲಾಘನೀಯ ವಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಬೇಕೆಂದು ತಿಳಿಸಿದರು.
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಪ್ರೋಟಿನ್‌ಯುಕ್ತ ಮೊಟ್ಟೆ, ಕಾರ್ಬೊಹೈಡ್ರೇಟ್, ಪೊಟಾಷಿಯಂ, ಸೋಡಿಯಂ, ಐರನ್‌ಯುಕ್ತ ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ಸೇವನೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗುವುದರ ಜೊತೆಯಲ್ಲಿ ಎಲ್ಲರೂ ಜೊತೆಗೆ ಕುಳಿತು ಊಟ ಮಾಡುವುದರ ಮೂಲಕ ಭಾವೈಕ್ಯತೆಯನ್ನು ಮೂಡಿಸಲಿದೆ ಎಂದರು.
ಬಿ.ಇ.ಓ ಚಂದ್ರಯ್ಯ ಮಾತನಾಡುತ್ತಾ ವಿದ್ಯಾರ್ಥಿಗಳ ಕಲಿಕೆ ಮತ್ತು ಬೌದ್ಧಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಹಾಗೂ ಅಪೌಷ್ಠಿಕತೆ ಮತ್ತು ರಕ್ತಹೀನತೆ ನಿವಾರಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಉತ್ತಮವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾ.ಪಂ ಕಾರ್ಯನಿರ್ವಹಕಾಧಿಕಾರಿ ಸುದರ್ಶನ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಶಿವಶಂಕರ್, ನೌಕರರ ಸಂಘದ ಅಧ್ಯಕ್ಷ ರಮೇಶ್ ಹೆಚ್.ಇ ಉಪಪ್ರಾಚಾರ್ಯರಾದ ಚನ್ನೇಗೌಡ, ಉಮೇಶ್‌ಗೌಡ, ದಕ್ಷಿಣಮೂರ್ತಿ, ಪಟ್ಟಾಭಿರಾಮು ಎಲ್ಲಾ ಬಿ.ಆರ್.ಪಿ ಹಾಗೂ ಸಿ,ಆರ್,ಪಿ ಗಳು ಶಿಕ್ಷಕರು ಉಪಸ್ಥಿತರಿದ್ದರು.
ಪಿ.ಎಂ ಪೋಷಣ್ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಶಾಸಕ ಕೆ.ಷಡಕ್ಷರಿ ಚುಕ್ಕಿ ವಿತರಣೆ ಮಾಡಿದರು.
ಇದನ್ನೂ ಓದಿ: Tumkur News: ವನ್ಯಜೀವಿಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ-ಸುರೇಶ್