Friday, 22nd November 2024

KEA Exam: VAO, GTTC ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರ ಪ್ರಕಟ

KEA Exam

ಬೆಂಗಳೂರು: ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ಸೆ.29ರಂದು ನಡೆದಿದ್ದ ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Exam) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ನೋಡಬಹುದಾಗಿದೆ.

ಕೆಇಎ ವೆಬ್‌ ಸೈಟ್‌ನಲ್ಲಿ http://kea.kar.nic.in ನಲ್ಲಿ ಅಭ್ಯರ್ಥಿಗಳು ಕೀ ಉತ್ತರ ಪಡೆಯಬಹುದಾಗಿದ್ದು, ಇವುಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಪ್ರಾಧಿಕಾರದ ವೆಬ್ ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಲಿಂಕ್‌ನಲ್ಲಿ ಮಾತ್ರ ಅ.2ರ ಸಂಜೆ 5 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆಗಳ ವಿವರಗಳನ್ನು ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ 50 ರೂ. ಪಾವತಿಸತಕ್ಕದ್ದು ಹಾಗೂ ಆಕ್ಷೇಪಣೆ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ಕಂಡ ನಿಗದಿತ ಮಾಹಿತಿ ಸಲ್ಲಿಸದ ಅಥವಾ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ತೀರ್ಮಾನಿಸುವ ಕೀ-ಉತ್ತರಗಳು ಅಂತಿಮವಾಗಿರುತ್ತವೆ ಎಂದು ಕೆಇಎ ತಿಳಿಸಿದೆ.

ಗ್ರಾಮ ಆಡಳಿತಾಧಿಕಾರಿ ಹುದ್ದೆ ಮತ್ತು ಜಿಟಿಟಿಸಿ ಹುದ್ದೆಗಳಿಗೆ ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರಗಳಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಈ ಸುದ್ದಿಯನ್ನೂ ಓದಿ | Job News: ಕೆನರಾ ಬ್ಯಾಂಕ್‌ನಲ್ಲಿ ಪದವೀಧರರಿಗೆ 3000 ಹುದ್ದೆ, ಅರ್ಜಿ ಸಲ್ಲಿಸಲು ಕೊನೆ ದಿನ ಅ.4

ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಪರೀಕ್ಷೆ ಯಾವಾಗ?

ಗ್ರಾಮ ಆಡಳಿತಾಧಿಕಾರಿ ಹುದ್ದೆ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವರಿಗೆ ಸೆ.29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆದಿದೆ. ಇನ್ನು ರಾಜ್ಯ ಸರ್ಕಾರ ಗ್ರೂಪ್‌ ಬಿ ಮತ್ತು ಸಿ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಿದ್ದರಿಂದ ಮತ್ತೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿತ್ತು. ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ. 26ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದ್ದು, ಅ. 27ರಂದು ಎಲ್ಲಾ ಅಭ್ಯರ್ಥಿಗಳಿಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ.

ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಅರ್ಹತಾ ಅಂಕ (ಕನಿಷ್ಠ 50) ಗಳಿಸಿದವರಿಗೆ ಮಾತ್ರ ಅ. 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ.