Monday, 25th November 2024

HD Kumaraswamy: ಒಂದು ದಿನವಾದರೂ ನನ್ನನ್ನು ಜೈಲಿಗೆ ಕಳಿಸಲು ಸರ್ಕಾರದಿಂದ ಸಂಚು: ಎಚ್.ಡಿ.ಕೆ

HD Kumaraswamy

ನವದೆಹಲಿ: ಹಿಂದೆ ಇದೇ ಸಿದ್ದರಾಮಯ್ಯ (Siddaramaiah) ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್‌ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಎಂದು ಆರೋಪ ಮಾಡಿದರು.

ಈ ಸುದ್ದಿಯನ್ನೂ ಓದಿ | KEA Exam: VAO, GTTC ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರ ಪ್ರಕಟ

ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ಗೊತ್ತಿದೆ

ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್‌ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್‌ಗೆ ಲೀಕ್ ಮಾಡಿರುವ ಹಿನ್ನಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಕುಮಾರಸ್ವಾಮಿ ತಿಳಿಸಿದರು.

ನಾನು ಆ ಪೋಲಿಸ್ ಅಧಿಕಾರಿಯ ಉದ್ಘಟತನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ದೂರಿದರು.

ಸರ್ಕಾರವನ್ನು ಮೆಚ್ಚಿಸಲು ಅಧಿಕಾರ ದುರ್ಬಳಕೆ

ಇಂಥ ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಾರೆ. ಅದಕ್ಕಾಗಿ ಜಾಮೀನು ತೆಗೆದುಕೊಂಡೆ. ಆ ಅಧಿಕಾರಿ ಮೇಲೆಯೂ ಪ್ರಕರಣ ಇದೆ. ಅವರು ಆರೋಪಿ ನಂಬರ್ 2. ಹೈಕೋರ್ಟ್‌ನಲ್ಲಿ ತನಿಖೆಗೆ ಸ್ಟೇ ತಗೊಂಡಿದ್ದಾರೆ. ನಾನು ಬರೀ ಜಾಮೀನು ತಗೊಂಡಿದ್ದೇನೆ. ಸ್ಟೇ ತೆಗೆದುಕೊಂಡಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಸುದ್ದಿಯನ್ನೂ ಓದಿ | US Army: ಅಮೆರಿಕದ ಸೇನಾ ಜಾಲದಲ್ಲಿ ಕೊಲ್ಲಿ ರಾಷ್ಟ್ರಗಳು ಬಂಧಿ; ಮಧ್ಯಪ್ರಾಚ್ಯದ 19 ದೇಶಗಳಲ್ಲಿವೆ ಯುಎಸ್‌ ಮಿಲಿಟರಿ ಬೇಸ್‌

ಗೃಹ ಸಚಿವ ಡಾ. ಪರಮೇಶ್ವರ ಶಬ್ದಪಂಡಿತರು. ನನ್ನ ಹೆಸರು ಉಲ್ಲೇಖಿಸಿಲ್ಲ ಅಂತಾರೆ. ಸಿಎಂ ಮೇಲೂ ಆರೋಪ ಇದೆ, ನಾಳೆ ಬೆಳಗ್ಗೆ ಬಂದು ನಿಮ್ಮ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಮುಖ್ಯಮಂತ್ರಿ ಅಂತಾ ಕರೆದರೆ ಏನು ಮಾಡುತ್ತೀರಿ. ನನ್ನ ವಿರುದ್ಧ ಬರೆದ ಪತ್ರ ಹೇಗೆ ಹಂಚಲಾಯಿತು? ನನ್ನ ವಿರುದ್ಧ ಸಿಎಂ ಕಚೇರಿಯಿಂದ ಸೋಮವಾರ ರಾತ್ರಿ ಮತ್ತೊಂದು ಪತ್ರ ದಾಖಲೆಗಳು ಹೋಗಿವೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ ಕುಮಾರ ಅವರನ್ನು ಇವರು ಎಲ್ಲಿಗೆ ಕರೆಸಿಕೊಂಡಿದ್ದರು? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.