Thursday, 21st November 2024

Kaveri Aarti: ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ಪ್ರಾಯೋಗಿಕ ‘ಕಾವೇರಿ ಆರತಿ’ ಆರಂಭ

kaveri aarti

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವದ (Dasara Festival 2024) ಅಂಗವಾಗಿ ವಿಶೇಷವಾದ ಕಾವೇರಿ ಆರತಿ (Kaveri Aarti) ಕಾರ್ಯಕ್ರಮ ನಡೆಯಲಿದೆ. ಇದು ಪ್ರಾಯೋಗಿಕವಾಗಿ ಐದು ದಿನಗಳ ಕಾಲ ನಡೆಯಲಿದ್ದು, ಉತ್ತರ ಭಾರತದ ಗಂಗಾ ಆರತಿ (ganga Aarti) ಮಾದರಿಯಲ್ಲೇ ಕಾವೇರಿ ನದಿಗೆ (Kaveri River) ಅಕ್ಟೋಬರ್ 3ರಿಂದ 7ರವರೆಗೆ ನಡೆಯಲಿದೆ.

ಈ ಬಗ್ಗೆ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ ಮಾಹಿತಿ ಹಂಚಿಕೊಂಡಿದ್ದು, ದಸರೆ ನಿಮಿತ್ತ ಪ್ರಾಯೋಗಿಕವಾಗಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ನಿಗದಿತ ಸ್ಥಳ ಗುರುತಿಸಿ, ನಿರಂತರವಾಗಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲಾಗುವುದು ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಬಳಿ ಇರುವ ಕಾವೇರಿ ನದಿ ಸ್ನಾನಘಟ್ಟ ಸ್ಥಳವನ್ನು ಶಾಸಕ ರಮೇಶ್ ಬಂಡಿಸಿದ್ದೇಗೌಡ, ಅದ್ವೈತ ವಾಚಸ್ಪತಿ ಡಾ ಭಾನುಪ್ರಕಾಶ್ ಶರ್ಮ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದರು. ಮುಂದಿನ ಸ್ಥಳ ಗುರುತಿಸುವವರೆಗೂ ಅದೇ ಸ್ಥಳದಲ್ಲಿ ವಾರದಲ್ಲಿ ಎರಡು ದಿನ ಶ್ರೀರಂಗಪಟ್ಟಣ ದಸರಾ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಆ.3ರಿಂದ ಕಾವೇರಿ ಆರತಿ ನಡೆಸುವಂತೆ ಸೂಚಿಸಿದ್ದಾರೆ.

ಈಗಾಗಲೇ ಹರಿದ್ವಾರ ಹಾಗೂ ಕಾಶಿ ಮಾದರಿಯಲ್ಲೇ ಸೂರ್ಯೋದಯ ಹಾಗೂ ಸೂರ್ಯಾಸ್ತ ಸಮಯದಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲೇ ಕಾವೇರಿ ನದಿಗೂ ಆರತಿ ನಡೆಸುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಸ್ಥಳೀಯ ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ಎಂಎಲ್ಸಿ ದಿನೇಶ್ ಗೂಳಿಗೌಡ ಸೇರಿದಂತೆ ಅನೇಕ ನಾಯಕರು ಹರಿದ್ವಾರ, ವಾರಣಾಸಿಗೆ ಭೇಟಿ ನೀಡಿ, ಪರಿಶೀಲಿಸಿದ್ದರು.

ಇದನ್ನೂ ಓದಿ: DK Shivakumar: ವಿಜಯದಶಮಿ ವೇಳೆಗೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಉದ್ಘಾಟನೆ: ಡಿ.ಕೆ. ಶಿವಕುಮಾರ್