ನವದೆಹಲಿ: ಆನ್‍ಲೈನ್‍ನಲ್ಲಿ ಪ್ರಸಾರವಾಗುವ ಚಲನಚಿತ್ರಗಳು , ಧ್ವನಿಮುದ್ರಿಕೆಗಳು, ನ್ಯೂಸ್ ಮತ್ತು ಪ್ರಚಲಿತ ವಿದ್ಯಮಾನಗಳು ಇನ್ನು ವಾರ್ತಾ ಇಲಾಖೆ ವ್ಯಾಪ್ತಿಗೆ ಒಳಪಡಲಿವೆ.
ದೇಶ-ವಿದೇಶಗಳ ಚಲನಚಿತ್ರಗಳು ಪ್ರಸಾರವಾಗುವ ನೆಟ್’ಫ್ಲಿಕ್ಸ್ ಮತ್ತಿತರ ಜಾಲ ತಾಣಗಳು ವಾರ್ತಾ ಇಲಾಖಾ ವ್ಯಾಪ್ತಿಗೆ ಒಳಪಡಿ ಸುವ ಮಹತ್ವದ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ಈ ತೀರ್ಮಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆನ್ನಲಾಗಿದೆ. ಆನ್‍ಲೈನ್‍ನಲ್ಲಿ ಅಡೆತಡೆ ಇಲ್ಲದೆ ಪ್ರಸಾರವಾಗುವ ಮಾಹಿತಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.