ಪುಣೆ: ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಹೆಲಿಕಾಪ್ಟರ್(Helicopter Crash)ವೊಂದು ಪುಣೆಯಲ್ಲಿ ಪತನಗೊಂಡಿದ್ದು, ಮೂರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುಣೆ ಸಮೀಪದ ಬವ್ಧಾನ್ನಲ್ಲಿ ಈ ದುರಂತ ಸಂಭವಿಸಿದ್ದು, ಇದು ಸರ್ಕಾರಿ ಹೆಲಿಕಾಪ್ಟರ್ ಅಥವಾ ಖಾಸಗಿ ಹೆಲಿಕಾಪ್ಟರ್ ಎಂದು ತಿಳಿದಿಲ್ಲ. ಹೆಲಿಕಾಪ್ಟರ್ನಲ್ಲಿ ಇಬ್ಬರು ಪೈಲಟ್ಗಳು ಮತ್ತು ಎಂಜಿನಿಯರ್ ಇದ್ದರು ಎನ್ನಲಾಗಿದೆ.
ಇಂದು ಬೆಳಗ್ಗೆ 6.45ರ ಸುಮಾರಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್ವಾಡ್ ಪೊಲೀಸರು ತಿಳಿಸಿದ್ದಾರೆ. “ಪುಣೆ ಜಿಲ್ಲೆಯ ಬವ್ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇದು ಯಾರ ಹೆಲಿಕಾಪ್ಟರ್ ಎಂದು ಇನ್ನೂ ತಿಳಿದಿಲ್ಲ ಎಂದು ಹಿರಿಯ ಇನ್ಸ್ಪೆಕ್ಟರ್ ಕನ್ಹಯ್ಯಾ ಥೋರಟ್ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಆಕ್ಸ್ಫರ್ಡ್ ಗಾಲ್ಫ್ ಕ್ಲಬ್ನ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
#BreakingNews | A helicopter, that was travelling to Juhu from Oxford Golf Course resort in Pune, crashed today morning, killing three people
— The Indian Express (@IndianExpress) October 2, 2024
Read Here: https://t.co/iiN1F6dlzT pic.twitter.com/z3XmWoUrFa
ಕೆಲವು ದಿನಗಳ ಹಿಂದೆಯಷ್ಟೇ ಭಾರತೀಯ ಕರಾವಳಿ ಭದ್ರತಾ ಪಡೆ (Indian Coast Guard-ICG)ಯ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (Advanced Light Helicopter-ALH) ಅನ್ನು ಗುಜರಾತ್ನ ಪೋರ್ ಬಂದರ್ನ ಸಮೀಪ ಅರಬ್ಬಿ ಸಮುದ್ರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿತ್ತು ಹೆಲಿಕಾಪ್ಟರ್ನಲ್ಲಿದ್ದ 4 ಮಂದಿ ಸಿಬ್ಬಂದಿಯ ಪೈಕಿ ಒಬ್ಬರನ್ನು ರಕ್ಷಿಸಲಾಗಿದ್ದು, ಉಳಿದ ಮೂವರು ಕಣ್ಮರೆಯಾಗಿದ್ದಾರೆ. ಇದರ ಬೆನ್ನಲ್ಲೇ ಹೆಲಿಕಾಪ್ಟರ್ನ ಅವಶೇಷ ಪತ್ತೆಯಾಗಿದೆ. ಶೋಧ ಕಾರ್ಯಾಚರಣೆಗಾಗಿ 4 ಹಡಗುಗಳು ಮತ್ತು 2 ವಿಮಾನಗಳನ್ನು ಬಳಸಲಾಗಿತ್ತು.
ಹಡಗನ್ನು ಸ್ಥಳಾಂತರಿಸುವ ವೇಳೆ ಈ ಅವಘಢ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ʼʼಗುಜರಾತ್ನಲ್ಲಿ ಇತ್ತೀಚೆಗೆ ಬೀಸಿದ ಭೀಕರ ಚಂಡಮಾರುತದ ಸಮಯದಲ್ಲಿ 67 ಮಂದಿಯನ್ನು ಭಾರತೀಯ ಕರಾವಳಿ ಭದ್ರತಾ ಪಡೆ ಈ ಹೆಲಿಕಾಪ್ಟರ್ ಮೂಲಕ ರಕ್ಷಿಸಿತ್ತು. ಪೋರ್ಬಂದರ್ನಿಂದ ಸುಮಾರು 45 ಕಿ.ಮೀ. ದೂರದಲ್ಲಿ ಸಮುದ್ರದಲ್ಲಿ ಸಿಲುಕಿದ್ದ ಸಿಬ್ಬಂದಿಯೊಬ್ಬರನ್ನು ರಕ್ಷಿಸಲಾಗಿತ್ತು. ಉಳಿದವರು ನಾಪತ್ತೆಯಾಗಿದ್ದರು.
ಈ ಸುದ್ದಿಯನ್ನೂ ಓದಿ: Child Sex Trafficking: ಸಿನಿಮೀಯ ರೀತಿಯಲ್ಲಿ ಪಾದ್ರಿ ಅರೆಸ್ಟ್- 2000 ಪೊಲೀಸರು, ಹೆಲಿಕಾಪ್ಟರ್.. ಎರಡು ವಾರ ನಡೆದ ರೋಚಕ ಕಾರ್ಯಾಚರಣೆ ಹೇಗಿತ್ತು ಗೊತ್ತಾ?