Sunday, 24th November 2024

Chikkaballapur News: ಇಂದು ಗಾಂಧಿ ಭವನ ಕಟ್ಟಡ ಉದ್ಘಾಟನೆ ಮತ್ತು ಗಾಂಧಿ ಜಯಂತಿ ಅಂಗವಾಗಿ ಗಾಂಧಿ ನಡಿಗೆ ಕಾರ್ಯಕ್ರಮ

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಗಾಂಧಿ ಭವನ ಕಟ್ಟಡ ಉದ್ಘಾಟನೆ ಹಾಗೂ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ ೨ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಜಿಲ್ಲಾ ಗ್ರಂಥಾಲಯ ಹತ್ತಿರ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಎದುರು ಇರುವ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಸನ್ಮಾನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ವಹಿಸಲಿದ್ದು ಕಾರ್ಯ ಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್  ನೆರವೇರಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ. ಪ್ರದೀಪ್ ಈಶ್ವರ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕ ಸಭಾ ಕ್ಷೇತ್ರದ ಸಂಸದರಾದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರಸಭೆ ಅಧ್ಯಕ್ಷ ಎ.ಗಜೇಂದ್ರ ರವರು ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಡಾ. ಎನ್. ಮಂಜುಳಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.  ಕೆ.ವಿ. ತ್ರಿಲೋಕಚಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.

ಗಾಂಧಿ ನಡಿಗೆ ಕಾರ್ಯಕ್ರಮ: ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗಾಂಧಿ ನಡಿಗೆ ಕಾರ್ಯಕ್ರಮವನ್ನು ನಗರದ ಜೂನಿಯರ್ ಕಾಲೇಜು ಆವರಣದಿಂದ ಶಿಡ್ಲಘಟ್ಟ ವೃತ್ತದವರೆಗೆ ಹಮ್ಮಿಕೊಳ್ಳಲಾಗಿದೆ ಹಾಗೂ ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮದಡಿ ಶಿಡ್ಲಘಟ್ಟ ವೃತ್ತದ ಸುತ್ತ ಮುತ್ತಲಲ್ಲಿ ಸ್ವಚ್ಚತಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.