Friday, 22nd November 2024

Chikkaballapur News: ಅ.4ರಂದು ಪಿಡಿಒ ಸೇರಿ ವಿವಿಧ ವೃಂದದ ನೌಕರರಿಂದ ಅನಿರ್ಧಿಷ್ಟಾವಧಿ ಧರಣಿ

ಚಿಕ್ಕಬಳ್ಳಾಪುರ : ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಅ.4 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುವುದಾಗಿ ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಮೋಹನ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈಕುರಿತ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು. 70೭೦ರಷ್ಟು ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮಪಂಚಾಯಿತಿಯಿಂದ ಶೇ.70ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ.ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು,ಕಾರ್ಯದರ್ಶಿ,ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಸೇರಿ ಎಲ್ಲಾ ಸಿಬ್ಬಂದಿ ವರ್ಗ ಎದುರಿಸುತ್ತಿರುವ ಸಮಸ್ಯೆ ಪರಿಹರಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಹತ್ತಾರು ವರ್ಷಗಳಿಂದ ಸರಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದಾರೆ.

ಆದರೆ ಇದಕ್ಕೆ ಸ್ಪಂದಿಸದೆ ಎಲ್ಲ ಸಮಸ್ಯೆಗಳಿಗೂ ಅಭಿವೃದ್ಧಿ ಅಧಿಕಾರಿಗಳು,ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆ ಗಾರರನ್ನಾಗಿ ಮಾಡುತ್ತಿರುವ ಇಲಾಖೆ ಧೋರಣೆ ಖಂಡಿಸಿ,ನ್ಯಾಯೋಚಿತ ಬೇಡಿಕೆ ಈಡೇರಿಸಲೇ ಬೇಕು ಎಂದು ಒತ್ತಾಯಿಸಿ ಅಕ್ಟೋಬರ್ ೨ರಿಂದಲೇ ಎಲ್ಲಾ ಸೇವೆಗಳನ್ನು ನಿಲ್ಲಿಸಿ ಅನಿರ್ಧಿಷ್ಟ ಹೋರಾಟ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬೇಡಿಕೆ

೧) ಏಳು ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡುವುದು ಹಾಗೂ ಜಿಲ್ಲೆಯಲ್ಲಿ ಸ್ನೇಹಿಚ್ಚೆ ಇಲ್ಲದೆ ಸಾರ್ವಜನಿಕ ಹಿತಾ ಸಕ್ತಿ ಹಿತದೃಷ್ಟಿ ತೋರದ ವರ್ಗಾವಣೆ ಮಾಡಬಾರದು ಮತ್ತು ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವ ಣೆಗೆ ಮುನ್ನ ಸಂಘದ ಸಲಹೆಯನ್ನು ಪಡೆಯುವುದು ೨) ರಾಜ್ಯದ ಎಲ್ಲಾ ಪಂಚಾಯಿತ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತಿಕರಿಸುವುದು ೩) ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಯ ಅನುಷ್ಠಾನ ಪಡಿಸುವ ಬಗ್ಗೆ ಗುರಿ ನಿಗದಿಯನ್ನು ಕೈಬಿಡುವುದು ಅವಶ್ಯಕತೆ ಇಲ್ಲದ ಕಡೆಗಳಲ್ಲಿ ಗ್ರಾಮ ಪಂಚಾಯತ್ ಅಭಿಪ್ರಾಯ ನಡೆದು ಕೂಸಿನ ಮನೆ ಮುಂದುವರಿಸುವ ಬಗ್ಗೆ, ಕ್ರಮ ಕೈಗೊಳ್ಳುವುದು ೪) ಗ್ರಾಮ ಪಂಚಾಯಿತಿಗೆ ಅಗತ್ಯವಿರುವ ಕಾರ್ಯದರ್ಶಿಗಳು ಲೆಕ್ಕ ಸಹಾಯಕರು ಹಾಗೂ ಅಗತ್ಯವಿದ್ದಮ್ಮ ಗ್ರಾಮ ಪಂಚಾಯತ್ ಸಿಬ್ಬಂದಿ ಗಳನ್ನು ನೇಮಕ ಮಾಡುವುದು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಮಾದರಿಯನ್ನು ಪರಿಷ್ಕರಿಸಿ ಪ್ರತಿಯೊಂದು ವಿಷಯಕ್ಕೂ ಒಬ್ಬರು ವಿಷಯ ನಿರ್ವಾಹಕರನ್ನು ನೇಮಿಸುವುದು ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ಒದಗಿಸು ವುದು. ೫) ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಹಾಗೂ ಬಡ್ತಿಯಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವುದು. ೬) ಕುಂದು ಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆ ಮಾದರಿಯಲ್ಲಿ ಸದೃಢಗೊಳಿಸುವುದು ಮತ್ತು ತಜ್ಞರ ಸಮಿತಿ ನೇಮಿಸುವುದು ಹಾಗೂ ಏಕರೂಪದ ಅಡಿಟ್ ಪದ್ಧತಿ ಜಾರಿಗೊಳಿಸುವುದು. ಮತ್ತು ಸೇವಾ ವಿಷಯಗಳನ್ನು ಸಕಾಲ ವ್ಯಾಪ್ತಿಗೆ ತರುವುದು, ಹಾಗೂ ಎಲ್ಲ ತಂತ್ರಾಂಶಗಳಿಗೆ ಏಕರೂಪದ ಸಹಾಯವಾಣಿ ವ್ಯವಸ್ಥೆ ಜಾರಿಗೊಳಿಸುವುದಾಗಿದೆ ಎಂದರು.

ಈ ವೇಳೆ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮೋಹನ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ಅಶೋಕ್, ಖಜಾಂಚಿ ರಾಮಾಂಜಿನಪ್ಪ, ಕಾರ್ಯದರ್ಶಿ ಸಂಘದ ಜಿಲ್ಲಾಧ್ಯಕ್ಷ ಎ.ಪಿ. ಅಶ್ವತ್ಥನಾರಾಯಣ, ಗ್ರಾಮಪಂಚಾಯಿತಿ ಸದಸ್ಯರ ಒಕ್ಕೂಟದ ತಾಲೂಕು ಅಧ್ಯಕ್ಷ ಚಂದ್ರಣ್ಣ, ಬಿಲ್ ಕಲೆಕ್ಟರ್ ಸಂಘದ ಜಿಲ್ಲಾಧ್ಯಕ್ಷ ಕೆ.ರವಿಕುಮಾರ್, ನಂದಿ ಪಿಡಿಒ ರವಿಕುಮಾರ್ ಮತ್ತಿತರರು ಇದ್ದರು.

ಇದನ್ನೂ ಓದಿ: Chikkaballapur News: ಹಿರಿಯ ನಾಗರಿಕರೇ ಮನೆಗೆ ಭೂಷಣ, ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ-ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ