ಕೊಪ್ಪಳ: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department Karnataka) ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ (Anganwadi Worker & Helper) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (WCD Koppal Recruitment 2024). ಒಟ್ಟು 461 ಹುದ್ದೆಗಳಿವೆ. ಆಸಕ್ತ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್ 23 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಂಗನಾಡಿ ಕಾರ್ಯಕರ್ತೆ – 87 ಹುದ್ದೆ ಮತ್ತು ಅಂಗನವಾಡಿ ಸಹಾಯಕಿ – 374 ಹುದ್ದೆಗಳಿವೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾಗಿರಬೇಕು. 10ನೇ ತರಗತಿ ತೇರ್ಗಡೆಯಾದವರು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 19 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ ಎಂದು ಅಧಿಸೂಚನೆ ತಿಳಿಸಿದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://karnemakaone.kar.nic.in/abcd/ApplicationForm_JA_org.aspx)
- ಜಿಲ್ಲೆ, ಹುದ್ದೆ ಸೆಲೆಕ್ಟ್ ಮಾಡಿ.
- ಅಗತ್ಯ ಮಾಹಿತಿಗಳನ್ನು ನಮೂದಿಸಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗೆ ರಿಕ್ವೆಸ್ಟ್ ನಂಬರ್ ಅಥವಾ ಅಪ್ಲಿಕೇಷನ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
- ಜನನ ಪ್ರಮಾನ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ತಹಶೀಲ್ದಾರರು / ಉಪ ತಹಶೀಲ್ದಾರರಿಂದ ಪಡೆದ 3 ವರ್ಷದೊಳಗಿನ ವಾಸಸ್ಥಳ ದೃಧೀಕರಣ ಪತ್ರ
- ಅಭ್ಯರ್ಥಿಯ ಜಾತಿ ಪ್ರಮಾಣ ಪತ್ರ
- ಅಂಗವಿಕಲರಾಗಿದ್ದರೆ ಆ ಕುರಿತಾದ ಪ್ರಮಾಣ ಪತ್ರ
- ಆಧಾರ್ ಕಾರ್ಡ್/ ಮತದಾರರ ಗುರುತಿನ ಚೀಟಿ / ರೇಷನ್ ಕಾರ್ಡ್ / ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ
- ರಾಜ್ಯ ಮಹಿಳಾ ಅಬಿವೃದ್ದಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
- ಎಲ್ಲ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಬೇಕು.
ಹೆಚ್ಚಿನ ವಿವರಗಳಿಗೆ ವಿಬ್‌ಸೈಟ್: karnemakaone.kar.nic.inಗೆ ಭೇಟಿ ನೀಡಿ