ನವದೆಹಲಿ: ಬಿಜೆಪಿ ಸಂಸದೆ ಕಂಗನಾ ರಣಾವತ್(Kangana Ranaut) ದಿನಕ್ಕೊಂದು ವಿವಾದದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಕೃಷಿ ಕಾಯ್ದೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಂಗನಾ ಮಹಾತ್ಮ ಗಾಂಧೀಜಿ(Mahatma Gandhi) ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ(Lal Bahadur Shastri) ಅವರ ನಡುವೆ ಹೋಲಿಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ಸ್ವಪಕ್ಷವನ್ನೇ ಮುಜುಗರಕ್ಕೀಡು ಮಾಡಿದೆ.
ಈ ಹಿಂದೆ ರೈತರ ಪ್ರತಿಭಟನೆಗಳ ಕುರಿತಾದ ಕಾಮೆಂಟ್ಗಳಿಗಾಗಿ ಹಿನ್ನಡೆಯನ್ನು ಎದುರಿಸಿದ ನಟಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120 ನೇ ಜನ್ಮದಿನದಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯ ವಿರುದ್ಧ ಅಪಮಾನ ಮಾಡುವಂತಹ ಪೋಸ್ಟ್ವೊಂದನ್ನು ಮಾಡಿ ವಿವಾದಕ್ಕೀಡಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ವೊಂದನ್ನು ಮಾಡಿರುವ ಕಂಗನಾ, ದೇಶ್ ಕೆ ಪಿತಾ ನಹೀ, ದೇಶ್ ಕೆ ತೋ ಲಾಲ್ ಹೋತೇ ಹೈ. ಧನ್ಯೇ ಹೈ ಭಾರತ್ ಮಾ ಕೆ ಯೇ ಲಾಲ್ (‘ದೇಶಕ್ಕೆ ರಾಷ್ಟ್ರಪತಿ ಇಲ್ಲ; ದೇಶಕ್ಕೆ ಕೇವಲ ಮಕ್ಕಳು ಮಾತ್ರ. ಭಾರತಮಾತೆಯ ಈ ಮಕ್ಕಳು ಧನ್ಯರು) ಎಂದು ಹೇಳಿದ್ದಾರೆ. ಈ ಪೋಸ್ಟ್ ಭಾರೀ ವಿವಾದಕ್ಕೀಡಾಗಿದೆ. ಪ್ರತಿಪಕ್ಷಗಳು ಕಂಗನಾ ವಿರುದ್ಧ ಕಿಡಿ ಕಾರಿದ್ದಾರೆ.
ಕಂಗನಾ ಮುಂದಿನ ಪೋಸ್ಟ್ನಲ್ಲಿ ದೇಶದಲ್ಲಿ ಸ್ವಚ್ಛತೆಯ ಕುರಿತು ಮಹಾತ್ಮ ಗಾಂಧಿಯವರ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಿಸಿದ್ದಾರೆ. ಕಂಗನಾರ ಈ ದ್ವಂದ್ವ ಹೇಳಿಕೆಗೆ ಪ್ರತಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇಟ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಂಗನಾ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನದಂದು ಈ ರೀತಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಗೋಡ್ಸೆ ಆರಾಧಕರು ಮಾತ್ರ ಬಾಪು ಮತ್ತು ಶಾಸ್ತ್ರಿ ನಡುವೆ ಬೇಧ ಮಾಡಲು ಸಾಧ್ಯ. ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಹೊಸ ಗೋಡ್ಸೆ ಭಕ್ತನನ್ನು ಮನಃಪೂರ್ವಕವಾಗಿ ಕ್ಷಮಿಸುವರೇ? ಹುತಾತ್ಮ ಪ್ರತಿಯೊಬ್ಬರೂ ಗೌರವಕ್ಕೆ ಅರ್ಹರು ಟಾಂಗ್ ಕೊಟ್ಟಿದ್ದಾರೆ.
ಕೆಲವು ದಿನಗಳ ಹಿಂದೆ ರದ್ದುಗೊಂಡಿರುವ ವಿವಾದಿತ 3 ಕೃಷಿ ಕಾಯ್ದೆಗಳನ್ನು ಸರ್ಕಾರ ವಾಪಸ್ ತರಬೇಕೆಂದು ಕಂಗನಾ ರಣಾವತ್ ಆಗ್ರಹಿಸಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜತೆಗೆ ಬಿಜೆಪಿ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು. ಪಕ್ಷಕ್ಕೂ ಅವರ ಅಭಿಪ್ರಾಯಕ್ಕೂ ಸಂಬಂಧವಿಲ್ಲ ಎಂದು ತಿಳಿಸಿತ್ತು. ಬಳಿಕ ಕಂಗನಾ ತಮ್ಮ ಹೇಳಿಕೆಯನ್ನು ಪಂಪಡೆದುಕೊಂಡಿದ್ದಾರೆ.
2020ರಲ್ಲಿ ರೈತರ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದ 3 ಕೃಷಿ ಕಾನೂನುಗಳನ್ನು ಮರಳಿ ತರಬೇಕು ಎಂಬ ತಮ್ಮ ಹೇಳಿಕೆಗೆ ವಿಷಾದಿಸುತ್ತೇನೆ ಎಂದು ಕಂಗನಾ ಹೇಳಿದ್ದಾರೆ.
ಕ್ಷಮೆ ಕೋರಿದ ಕಂಗನಾ
‘ʼಕೆಲ ದಿನಗಳ ಹಿಂದೆ ಮಾಧ್ಯಮದವರು ಕೃಷಿ ಕಾಯ್ದೆಯ ವಿಚಾರವಾಗಿ ನನ್ನನ್ನು ಕೆಲ ಪ್ರಶ್ನೆ ಕೇಳಿದರು. ಆಗ ನಾನು ಕೃಷಿ ಕಾಯ್ದೆಗಳನ್ನು ಮರಳಿ ತರಬೇಕೆಂದು ರೈತರು ಪ್ರಧಾನಿ ಬಳಿ ಮನವಿ ಮಾಡಬೇಕು ಎಂದಿದ್ದೆ. ನನ್ನ ಈ ಅಭಿಪ್ರಾಯದಿಂದ ಹಲವರು ಬೇಸರ ಮತ್ತು ನಿರಾಶೆಗೆ ಒಳಗಾಗಿದ್ದಾರೆ. ಕೃಷಿ ಕಾಯ್ದೆಯ ಪ್ರಸ್ತಾವನೆ ಬಂದಿದ್ದಾಗ ನಾವೆಲ್ಲರೂ ಅದಕ್ಕೆ ಬೆಂಬಲ ವ್ಯಕ್ತಪಡಿಸಿದ್ದೆವು. ಆದರೆ ಸಂವೇದನಾಶೀಲತೆ ಮತ್ತು ಸಹಾನುಭೂತಿಯಿಂದ ಪ್ರಧಾನಿ ಮೋದಿ ಅವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದರು. ಮೋದಿ ಅವರ ನಿರ್ಣಯವನ್ನು ಗೌರವಿಸುವುದು ಎಲ್ಲ ಕಾರ್ಯಕರ್ತರ ಕರ್ತವ್ಯ. ನಾನು ಈಗ ಕೇವಲ ನಟಿಯಲ್ಲ ಬಿಜೆಪಿಯ ಕಾರ್ಯಕರ್ತೆಯೂ ಹೌದು. ಹಾಗಾಗಿ ನನ್ನ ಮಾತಿನಿಂದ, ಅಭಿಪ್ರಾಯದಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಮತ್ತು ಹೇಳಿಕೆಯನ್ನು ಹಿಂಪಡೆಯತ್ತೇನೆʼʼ ಎಂದಿ ವಿಡಿಯೊ ಮೂಲಕ ಕಂಗನಾ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Kangana Ranaut: ಕೃಷಿ ಕಾಯ್ದೆ ಕುರಿತಾದ ಹೇಳಿಕೆ ಹಿಂಪಡೆದ ಕಂಗನಾ