Friday, 22nd November 2024

HD Kumarswamy : ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಬೆದರಿಕೆ ದಾಖಲಿಸಿದ ಉದ್ಯಮಿ ವಿಜಯ್‌ ಟಾಟಾ

HD Kumaraswamy

ಬೆಂಗಳೂರು: ಕೇಂದ್ರ ಕೈಗಾರಿಕಾ ಸಚಿವ ಎಚ್‌ ಡಿ ಕುಮಾರಸ್ವಾಮಿ (HD Kumarswamy) ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ದಾಖಲಿಸಿದ್ದಾರೆ. 50 ಕೋಟಿ ರೂಪಾಯಿ ನೀಡುವಂತೆ ಅವರು ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಡಿನೋಟಿಫಿಕೇಷನ್, ಗಣಿಗಾರಿಕೆಗೆ ಅನುಮತಿ ಪ್ರಕರಣಗಳಲ್ಲಿ ಕಾನೂನು ಸಮರ ನಡೆಸುತ್ತಿರುವ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತೊಂದು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಕುಮಾರಸ್ವಾಮಿ 50 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಲ್ಲದೆ ಬೆದರಿಕೆ ಹಾಕಿದ್ದಾರೆ ಎಂದು ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ವಿಜಯ್ ಟಾಟಾ ಹೇಳಿದ್ದಾರೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ಮಾಡಿರುವ ಆರೋಪದ ವಿವರ ಇಲ್ಲಿದೆ.

ಜೆಡಿಎಸ್ ಮುಖಂಡರಾದ ರಮೇಶ್ ಗೌಡ ನಮ್ಮ ಮನೆಗೆ ಬಂದಿದ್ದರು. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆ ನಿಲ್ಲುತ್ತಿದ್ದಾರೆ ಎಂದು ಹೇಳಿದರು. ಇದೇ ವೇಳೆ, ಹೆಚ್​​ಡಿ ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಚುನಾವಣೆಗಾಗಿ 50 ಕೋಟಿ ರೂಪಾಯಿ ಹಣ ನೀಡುವಂತೆ ನನ್ನನ್ನು ಕೇಳಿದ್ದರು. ನಾನು ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಡು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಸಿದ್ದರಾಮಯ್ಯ ಅವರೇ, ನಿಮ್ಮ ಆತ್ಮಸಾಕ್ಷಿಗೆ ಮಂಕು ಕವಿದಿದೆ, ಬಡಿದೆಬ್ಬಿಸಿ! ಪ್ರಲ್ಹಾದ್‌ ಜೋಶಿ ಚಾಟಿ

ಹಣ ಕೊಡುವುದಿಲ್ಲ ಎಂದಿದ್ದಕ್ಕೆ, ನಿಮ್ಮ ಪ್ರಾಜೆಕ್ಟ್ ಕಂಪ್ಲೀಟ್ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ದೇವಸ್ಥಾನ ಕಟ್ಟಲು ರಮೇಶ್ ಗೌಡ ಕೂಡ 5 ಕೋಟಿ ರೂಪಾಯಿ ಕೇಳಿದ್ದರು. ತುಂಬಾ ಕಷ್ಟವಿದೆ ಯಾವುದೇ ಕಾರಣಕ್ಕೂ ಹಣ ಕೊಡಲ್ಲ ಅಂದಿದ್ದೆ. 1 ವಾರದಿಂದ ರಮೇಶ್ ಗೌಡ ನಿರಂತರವಾಗಿ ಕಾಟ ಕೊಡುತ್ತಿದ್ದಾರೆ. 2019ರ ಚುನಾವಣೆಯಲ್ಲೂ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೆವು ಎಂದು ವಿಜಯ್ ಟಾಟ ಹೇಳಿದ್ದಾರೆ.