Friday, 22nd November 2024

Pankaj Yadav : ಆರ್‌ಜೆಡಿ ಪ್ರಧಾನ ಕಾರ್ಯದರ್ಶಿ ಪಂಕಜ್ ಯಾದವ್‌ಗೆ ದುಷ್ಕರ್ಮಿಗಳಿಂದ ಗುಂಡೇಟು

Pankaj Yadav

ಪಾಟ್ನಾ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬಿಹಾರ ಪ್ರಧಾನ ಕಾರ್ಯದರ್ಶಿ ಪಂಕಜ್ ಯಾದವ್ (Pankaj Yadav) ಅವರು ಬುಧವಾರ ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಬಳಿಕ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೊಗಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ದಾಳಿಕೋರರು ಮೋಟಾರ್ ಸೈಕಲ್ ನಲ್ಲಿ ಬಂದು ಗುಂಡು ಹಾರಿಸಿ, ಅವರ ಎದೆಗೆ ಹೊಡೆದಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ಕೆಲವು ಶಂಕಿತರನ್ನು ಬಂಧಿಸಲು ದಾಳಿ ನಡೆಸುತ್ತಿದ್ದಾರೆ.

Bangladesh Government : ಭಾರತದ ರಾಯಭಾರಿಯನ್ನು ವಾಪಸ್ ಕರೆಸಿಕೊಂಡ ಬಾಂಗ್ಲಾದೇಶ

ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು (Bangladesh Government) ರಾಜತಾಂತ್ರಿಕ ಪುನರ್‌ರಚನೆ ಮಾಡುತ್ತಿದ್ದು ಭಾರತದ ರಾಯಭಾರಿ ಸೇರಿದಂತೆ ಐದು ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಅಲ್ಲಿನ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಗುರುವಾರ ಈ ಮಾಹಿತಿ ನೀಡಿದ್ದಾರೆ. ಹಲವು ವಾರಗಳ ಹಿಂಸಾತ್ಮಕ ಪ್ರತಿಭಟನೆಗಳ ನಂತರ ದಕ್ಷಿಣ ಏಷ್ಯಾ ರಾಷ್ಟ್ರದಲ್ಲಿ ಪ್ರಮುಖ ರಾಜಕೀಯ ಬದಲಾವಣೆಗಳು ನಡೆದಿದ್ದವು. ಬಳಿಕ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಆರಂಭಗೊಂಡಿತ್ತು. ಆಗಸ್ಟ್ 5ರಂದು ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಬೇಕಾಯಿತು.

ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್, ಆಸ್ಟ್ರೇಲಿಯಾ ಕ್ಯಾನ್ಬೆರಾ, ಪೋರ್ಚುಗಲ್‌ ರಾಜಧಾನಿ ಲಿಸ್ಬನ್ ನವದೆಹಲಿಯ ರಾಯಭಾರಿಗಳು ಮತ್ತು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಕಾಯಂ ನಿಯೋಗವನ್ನು ತಕ್ಷಣವೇ ಢಾಕಾಗೆ ಮರಳುವಂತೆ ವಿದೇಶಾಂಗ ಸಚಿವಾಲಯ ಆದೇಶಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಕ್ಷಣವೇ ತಮ್ಮ ಜವಾಬ್ದಾರಿಗಳನ್ನು ಹಸ್ತಾಂತರಿಸಿ ಹಿಂತಿರುಗುವಂತೆ ಅವರಿಗೆ ತಿಳಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಬ್ರಿಟನ್‌ನ ಹೈಕಮಿಷನರ್ ಅಥವಾ ರಾಯಭಾರಿ ಸೈದಾ ಮುನಾ ತಸ್ನೀಮ್ ಅವರನ್ನು ವಾಪಸ್ ಕರೆಸಿಕೊಂಡ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.