Sunday, 6th October 2024

Job Guide: ನಬಾರ್ಡ್‌ನಲ್ಲಿ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Job Guide

ಬೆಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (National Bank for Agriculture and Rural Development) ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NABARD Recruitment 2024). ಆಫೀಸ್ ಅಟೆಂಡಂಟ್ (Office Attendant)-ಗ್ರೂಪ್‌ ಸಿ ಹುದ್ದೆ ಇದಾಗಿದೆ. ಒಟ್ಟು 108 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯದಲ್ಲಿ 8 ಹುದ್ದೆಗಳಿವೆ. ಎಸ್‌ಎಸ್‌ಎಲ್‌ಸಿ / ಹತ್ತನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಅಕ್ಟೋಬರ್‌ 21 (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕರ್ನಾಟಕ – 8, ಆಂಧ್ರ ಪ್ರದೇಶ – 2, ಅರುಣಾಚಲ ಪ್ರದೇಶ – 1, ಬಿಹಾರ – 3, ಛತ್ತೀಸ್‌ಗಢ – 2, ಗೋವಾ – 2, ಗುಜರಾತ್ – 3, ಹರಿಯಾಣ – 3, ಹಿಮಾಚಲ ಪ್ರದೇಶ – 2, ಜಮ್ಮು & ಕಾಶ್ಮೀರ – 2, ಜಾರ್ಖಂಡ್ – 2, ಕೇರಳ – 5, ಮಧ್ಯಪ್ರದೇಶ – 5, ಮಹಾರಾಷ್ಟ್ರ – 35, ಮಣಿಪುರ – 1, ಮೇಘಾಲಯ – 1, ಮಿಜೋರಾಂ – 1, ನವದೆಹಲಿ – 2, ಒಡಿಶಾ – 5, ಪಂಜಾಬ್ – 2, ರಾಜಸ್ಥಾನ – 3, ತಮಿಳುನಾಡು – 5, ತೆಲಂಗಾಣ – 1, ತ್ರಿಪುರ – 1, ಉತ್ತರ ಪ್ರದೇಶ – 5, ಉತ್ತರಾಖಂಡ – 2, ಪಶ್ಚಿಮ ಬಂಗಾಳ – 4 ಹುದ್ದೆಗಳಿವೆ. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌/ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಸೈನಿಕರು 50 ರೂ. ಪಾವತಿಸಬೇಕು. ಉಳಿದ ಎಲ್ಲ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಟೆಸ್ಟ್‌, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 35,000 ರೂ. ಮಾಸಿಕ ವೇತನ ದೊರೆಯಲಿದೆ. ರಾಜ್ಯದಲ್ಲಿ ಬೆಂಗಳೂರು, ಬೆಳಗಾಂ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಹಾಸನ, ಗುಲ್ಬರ್ಗ, ಉಡುಪಿಯಲ್ಲಿ ಪರೀಕ್ಷೆ ನಡೆಯಲಿದೆ.

NABARD Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ibpsonline.ibps.in/nabardsep24/)
  • ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ಸೂಕ್ತ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ಬರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಈ ಸುದ್ದಿಯನ್ನೂ ಓದಿ: WCD Koppal Recruitment 2024: ದ್ವಿತೀಯ ಪಿಯು ಪಾಸಾದವರಿಗೆ ಗುಡ್‌ನ್ಯೂಸ್‌; ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 461 ಹುದ್ದೆಗಳಿಗೆ ಅಪ್ಲೈ ಮಾಡಿ