Saturday, 16th November 2024

Physical Abuse: ಹಿರಿಯ ನಾಯಕರ ಎದುರೇ ವೇದಿಕೆ ಮೇಲೆ ಕಾಂಗ್ರೆಸ್‌ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ; ವಿಡಿಯೋ ಇದೆ

physical abuse

ಹಿಸ್ಸಾರ್‌: ಹರಿಯಾಣದಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಮತ್ತು ಇತರ ನಾಯಕರ ಸಮ್ಮುಖದಲ್ಲಿಯೇ ವೇದಿಕೆಯ ಮೇಲೆ ಕಾಂಗ್ರೆಸ್ ಕಾರ್ಯಕರ್ತೆಗೆ ಕಿರುಕುಳ(Physical Abuse) ನೀಡಿದ ಘಟನೆಯೊಂದು ವರದಿಯಾಗಿದೆ. ಈ ವೀಡಿಯೊವನ್ನು ಬಿಜೆಪಿ ಶನಿವಾರ ಹಂಚಿಕೊಂಡಿದ್ದು, ಕಾಂಗ್ರೆಸ್‌ ಅನ್ನು ಮಹಿಳಾ ವಿರೋಧಿ ಪಕ್ಷ ಎಂದು ಕರೆದಿದೆ.

ಹರಿಯಾಣದಲ್ಲಿ ಇಂದು ಕೊನೆಯ ಹಂತದ ಮತದಾನ ನಡೆದಿದ್ದು, ಇಂದೆ ಬಿಜೆಪಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ವಿಡಿಯೋದಲ್ಲಿ ಸೋನಿಯಾ ದೂಹನ್‌ ಎಂಬ ಕಾಂಗ್ರೆಸ್‌ ಕಾರ್ಯಕರ್ತೆ ವೇದಿಕೆ ಮೇಲೆ ನಿಂತಿದ್ದಾಗ ಹಿಂದಿನಿಂದ ವ್ಯಕ್ತಿಯೊಬ್ಬ ಆಕೆಯನ್ನುಮುಟ್ಟಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ, ದೀಪೇಂದರ್ ಹೂಡಾ ಅವರ ಮೌನವನ್ನು ಪ್ರಶ್ನಿಸಿದ್ದಾರೆ ಮತ್ತು ಅನೇಕ ಮಹಿಳಾ ಕಾಂಗ್ರೆಸ್ ನಾಯಕರು ದುರ್ನಡತೆಯಿಂದಾಗಿ ಪಕ್ಷವನ್ನು ತೊರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಅತ್ಯಂತ ನಾಚಿಕೆಗೇಡಿನ ವೀಡಿಯೊ ಹೊರಬಿದ್ದಿದೆ. ಇದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ ಮತ್ತುಕಾಂಗ್ರೆಸ್‌ ಸಂಸದೆ ಕುಮಾರಿ ಸೆಲ್ಜಾ ಅದನ್ನು ಖಚಿತಪಡಿಸಿದ್ದಾರೆ. ಹಗಲು ಹೊತ್ತಿನಲ್ಲಿ, ದೀಪೇಂದರ್ ಹೂಡಾ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ವೇದಿಕೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮಹಿಳೆಯರ ಮೇಲೆ ಬಹಿರಂಗವಾಗಿ ಕಿರುಕುಳ ನೀಡುತ್ತಿದ್ದಾರೆ. ಕಾಂಗ್ರೆಸ್‌ನ ಮಹಿಳೆಯರು ಸಾರ್ವಜನಿಕ ವೇದಿಕೆಗಳಲ್ಲೇ ಸುರಕ್ಷಿತವಾಗಿಲ್ಲ, ಹೀಗಿರುವಾಗ ರಾಜ್ಯದ ಮಹಿಳೆಯರು ಸುರಕ್ಷಿತವಾಗಿರುವುದು ಹೇಗೆ? ಪೂನವಾಲ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಮಹಿಳಾ ವಿರೋಧಿ ಮನಸ್ಥಿತಿಯನ್ನು ಸೂಚಿಸುತ್ತದೆ. ಕಾಂಗ್ರೆಸ್‌ ಪುರುಷರ ದುರ್ವರ್ತನೆಯಿಂದಾಗಿ ಕಾಂಗ್ರೆಸ್‌ನ ಹಲವು ಮಹಿಳಾ ಮುಖಂಡರು ಪಕ್ಷ ತೊರೆಯುತ್ತಿದ್ದಾರೆ. ಆದರೂ ಮಹಿಳಾ ಸಬಲೀಕರಣದ ಘೋಷಣೆಯನ್ನು ಪ್ರಚಾರ ಮಾಡುವ ಪ್ರಿಯಾಂಕಾ ವಾದ್ರಾ ಮೌನವಾಗಿದ್ದಾರೆ.ಹೂಡಾ ಬೆಂಬಲಿಗರ ವಿರುದ್ಧ ಪ್ರಿಯಾಂಕಾ ವಾದ್ರಾ ಮತ್ತು ರಾಹುಲ್ ಗಾಂಧಿ ಕ್ರಮ ಕೈಗೊಳ್ಳುತ್ತಾರೆಯೇ? ಎಂದು ಕೇಳಿದ್ದಾರೆ.

ಕಠಿಣ ಕ್ರಮಕ್ಕೆ ಕುಮಾರಿ ಸೆಲ್ಜಾ ಆಗ್ರಹ

ಏತನ್ಮಧ್ಯೆ, ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ಸಂತ್ರಸ್ತೆ ಜತೆ ಮಾತನಾಡಿರುವುದಾಗಿ ಹೇಳಿದರು. ತನ್ನೊಂದಿಗೆ ಯಾರೋ ಒಬ್ಬ ವ್ಯಕ್ತಿ ಅನುಚಿತವಾಗಿ ವರ್ತಿಸಿರುವುದಾಗಿ ಆಕೆ ಹೇಳಿದ್ದಾಳೆ. ಇಂತಹ ವ್ಯಕ್ತಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ: Haryana Election 2024: ಹರಿಯಾಣ ವಿಧಾನಸಭೆ ಚುನಾವಣೆ ಮತದಾನ ಆರಂಭ