ಭೋಪಾಲ್: ಮುಂದೊಂದು ದಿನ ಭಾರತ ಕ್ರಿಕೆಟ್ ತಂಡದಲ್ಲಿ ಆಡುವ ಕನಸು ಕಂಡಿದ್ದ 15 ವರ್ಷದ ಯುವ ಕ್ರಿಕೆಟಿಗ ಮಖಾನ್ ಸಿಂಗ್ ಕ್ರಿಕೆಟ್ ಆಡುತ್ತಿರುವಾಗಲೇ ಮೈದಾನದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ದುರ್ಘಟನೆ ಮಧ್ಯಪ್ರದೇಶದ(Madhya Pradesh) ಸುಸ್ನರ್ನಲ್ಲಿ ಸಂಭವಿಸಿದೆ.
ಎಂದಿನಂತೆ ಸುಸ್ನರ್ ಮೈದಾನದಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಡುತ್ತಿದ್ದ ವೇಳೆ ಮಖಾನ್ ಸಿಂಗ್ ಅಸ್ವಸ್ಥಗೊಂಡಿದ್ದಾನೆ. ಕ್ರಿಕೆಟ್ ಪಂದ್ಯದ ನಡುವೆಯೇ ಮಖಾನ್ ಸಿಂಗ್ ಮೈದಾನದಲ್ಲಿ ಕುಸಿದು ಬಿದ್ದಿದ್ದಾನೆ. ಮಖಾನ್ ಕುಸಿದು ಬಿದ್ದ ಬೆನ್ನಲ್ಲೇ ಸಹ ಆಟಗಾರರು ನೆರವಿಗೆ ಆಗಮಿಸಿದ್ದಾರೆ. ಬಳಿಕ ಸ್ಥಳೀಯರ ನೆರವಿನಿಂದ ಮಖಾನ್ ಸಿಂಗ್ನನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಮಖಾನ್ ಸಿಂಗ್ ಮೃತಪಟ್ಟಿರುವುದಾಗಿ ದೃಢಡಿಸಿದ್ದಾರೆ. 15ನೇ ವಯಸ್ಸಿನಲ್ಲಿ ಸುಸ್ನರ್ ಸ್ಥಳೀಯ ಕ್ಲಬ್ ತಂಡದಲ್ಲಿ ಸ್ಥಾನ ಪಡೆದಿದ್ದ ಮಖಾನ್ ಸೀಮಗ್ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದ. ತಂಡದ ಹಲವು ಗೆಲುವಿನ ರೂವಾರಿಯಾಗಿಯೂ ಗಮನಸೆಳೆದಿದ್ದ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ IND vs BAN 1st T20: ಅರ್ಷದೀಪ್ ಬೌಲಿಂಗ್ ದಾಳಿಗೆ ತತ್ತರಿಸಿದ ಬಾಂಗ್ಲಾ; ಭಾರತಕ್ಕೆ 7 ವಿಕೆಟ್ ಜಯ
ಪಾಕಿಸ್ತಾನದಲ್ಲಿ ಭೀಕರ ಸ್ಫೋಟ; ಇಬ್ಬರು ಚೀನಿ ನಾಗರಿಕರು ಬಲಿ
ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣ (Karachi Airport)ದ ಹೊರಗೆ ಭಾನುವಾರ (ಅಕ್ಟೋಬರ್ 6) ತಡರಾತ್ರಿ ಸ್ಫೋಟ ಸಂಭವಿಸಿ ಇಬ್ಬರು ಚೀನಿ ಪ್ರಜೆಗಳು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪಾಕಿಸ್ತಾನ ಪ್ರಜೆಗಳೂ ಸೇರಿದ್ದಾರೆ. ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಈ ಸ್ಫೋಟ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ (Karachi Airport Explosion).
ಪ್ರಾಥಮಿಕ ಮಾಹಿತಿ ಪ್ರಕಾರ ತೈಲ ಟ್ಯಾಂಕರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ವಿದೇಶಿ ಪ್ರಜೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಅಜ್ಫರ್ ಮಹೇಸರ್ ಹೇಳಿದ್ದಾರೆ. “ಪ್ರಾಥಮಿಕ ಮಾಹಿತಿಯ ಪ್ರಕಾರ, ತೈಲ ಟ್ಯಾಂಕರ್ಗೆ ಬೆಂಕಿ ಹೊತ್ತಿಕೊಂಡಿದ್ದು, ಅದು ಇತರ ಹಲವು ವಾಹನಗಳಿಗೆ ಹರಡಿದೆ. ಮೇಲ್ನೋಟಕ್ಕೆ ಇದು ಭಯೋತ್ಪಾದಕ ದಾಳಿಯಂತೆ ಕಾಣಿಸುತ್ತಿದ್ದು, ಸೂಕ್ತ ತನಿಖೆ ನಡೆಸುತ್ತೇವೆʼʼ ಎಂದು ಹೇಳಿದ್ದಾರೆ.
ಹೊಣೆ ಹೊತ್ತ ಬಲೂಚ್ ಲಿಬರೇಷನ್ ಆರ್ಮಿ
ಪ್ರತ್ಯೇಕತಾವಾದಿ ಗುಂಪು ಬಲೂಚ್ ಲಿಬರೇಷನ್ ಆರ್ಮಿ (Baloch Liberation Army) ದಾಳಿಯ ಹೊಣೆ ಹೊತ್ತುಕೊಂಡಿದೆ. ಎಂಜಿನಿಯರ್ಗಳು ಸೇರಿದಂತೆ ಚೀನಾದ ಪ್ರಜೆಗಳನ್ನು ಸಾಗಿಸುವ ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ. ಅಫ್ಘಾನಿಸ್ತಾನ ಮತ್ತು ಇರಾನ್ ಗಡಿಯಲ್ಲಿರುವ ಬಲೂಚಿಸ್ತಾನ ಪ್ರಾಂತ್ಯವನ್ನು ಸ್ವಾತಂತ್ರಗೊಳಿಸಲು ಬಿಎಲ್ಎ ಹೋರಾಟ ನಡೆಸುತ್ತಿದೆ. ಆಗಸ್ಟ್ನಲ್ಲಿ ನಡೆಸಿದ ದಾಳಿಯಲ್ಲಿ 70 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.
ಪಾಕಿಸ್ತಾನದಲ್ಲಿರುವ ಚೀನಾದ ರಾಯಭಾರ ಕಚೇರಿ ಈ ಸ್ಫೋಟವನ್ನು ಭಯೋತ್ಪಾದಕ ದಾಳಿ ಎಂದು ಕರೆದಿದೆ ಮತ್ತು ಪೋರ್ಟ್ ಖಾಸಿಮ್ ಎಲೆಕ್ಟ್ರಿಕ್ ಪವರ್ ಕಂಪನಿಯ ಬೆಂಗಾವಲು ವಾಹನದ ಮೇಲೆ ವಿಮಾನ ನಿಲ್ದಾಣದ ಬಳಿ ದಾಳಿ ನಡೆಸಲಾಗಿದೆ ಎಂದು ಹೇಳಿದೆ. ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಈ ಬಗ್ಗೆ ಮಾತುಕತೆ ನಡೆಸುತ್ತಿದೆ.