ಶಿವಮೊಗ್ಗ: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿರುವ ಘಟನೆ ತುಂಗಾನಗರ (Shivamogga News) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮು ಮೇಲೆ ಗುಂಡು ಹಾರಿಸಲಾಗಿದೆ. ಆತ್ಮರಕ್ಷಣೆಗಾಗಿ ತುಂಗಾನಗರ ಠಾಣೆಯ ಇನ್ಸ್ ಪೆಕ್ಟರ್ ಗುರುರಾಜ್ ಗುಂಡು ಹಾರಿಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ, ಪೊಲೀಸ್ ಸಿಬ್ಬಂದಿ ಮತ್ತು ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಶರಣಾಗುವಂತೆ ಎಚ್ಚರಿಕೆ ನೀಡಿ, ಅಂತಿಮವಾಗಿ ಕಾಲಿಗೆ ಗುಂಡು ಹಾರಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದರು.
ಈ ಸುದ್ದಿಯನ್ನೂ ಓದಿ | Viral Video: ಕೆಫೆಯಲ್ಲಿ ಯುವತಿಯೊಂದಿಗೆ ಸಿಕ್ಕಿಬಿದ್ದ ಗೆಳೆಯನಿಗೆ ಗೆಳತಿ ಮಾಡಿದ್ದೇನು ನೋಡಿ!
ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿ, ಹಬಿಬ್ವುಲ್ಲಾ ಓರ್ವ ರೌಡಿಶೀಟರ್, ಈತನ ವಿರುದ್ಧ ತುಂಗಾನಗರ ಪೊಲೀಸ್ ಠಾಣೆ ಸೇರಿ ವಿವಿಧ ಠಾಣೆಗಳಲ್ಲಿ ಒಟ್ಟು 6 ಪ್ರಕರಣಗಳಿವೆ. ವ್ಯಕ್ತಿಯೊಬ್ಬನ ಬೆನ್ನಿಗೆ ಚಾಕು ಇರಿದ ಪ್ರಕರಣದಲ್ಲಿ ಈತನ ವಿರುದ್ಧ ಸೆ. 13ರಂದು ತುಂಗಾನಗರ ಠಾಣೆಯಲ್ಲಿ ಸೆಕ್ಷನ್ 307ರ ಅಡಿ ಪ್ರಕರಣ ದಾಖಲಾಗಿತ್ತು.
ಹಬಿಬ್ವುಲ್ಲಾನ ಪತ್ತೆಗಾಗಿ ತುಂಗಾನಗರ ಪೊಲೀಸ್ ಠಾಣೆಯ ಸಿಪಿಐ ಗುರುರಾಜ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಗರುಡ ಲೇಔಟ್ನಲ್ಲಿ ಆರೋಪಿ ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಇದರಿಂದ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಹಬಿಬ್ವುಲ್ಲಾ 2020ರಲ್ಲಿ ಜೈಲಿಗೆ ಹೋಗಿ ಜುಲೈನಲ್ಲಿ ಬಿಡುಗಡೆಯಾಗಿ ಮತ್ತೆ ಕೊಲೆ ಯತ್ನ ನಡೆಸಿದ್ದ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ಬಟ್ಟೆ ಬಿಚ್ಚಿಸಿ ಹಲ್ಲೆ; ವಿಡಿಯೊ ವೈರಲ್
ಬೆಂಗಳೂರು: ನಡುರಸ್ತೆಯಲ್ಲಿ ವ್ಯಕ್ತಿಯ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆಯೊಂದು ನಗರದಲ್ಲಿ ನಡೆದಿದೆ. ಥಣಿಸಂದ್ರದ ಹಜ್ ಭವನದ ಮುಂಭಾಗ ಘಟನೆ ನಡೆದಿದ್ದು, ರಸ್ತೆಯಲ್ಲಿ ಗುಂಪೊಂದು ವ್ಯಕ್ತಿಯನ್ನು ಬೆತ್ತಲೆ ಮಾಡಿ ಮನಬಂದಂತೆ ಹಲ್ಲೆ (Assault Case) ನಡೆಸಿದೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆ ಹಿನ್ನೆಲೆ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಕಿರಿಕಿರಿ ಅನುಭವಿಸಿದ್ದಾರೆ. ಯಾವುದೇ ಭಯವಿಲ್ಲದೇ ನಡುರಸ್ತೆಯಲ್ಲೇ ಪುಂಡರು ಈ ಕೃತ್ಯ ಎಸಗಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
A road rage incident occurred on Thanisandra Main Road near Haj Bhavan, where a group of individuals forcibly removed a man's clothing and subjected him to severe physical assault. The victim was slapped, punched, and brutally beaten by these individuals. It is deeply concerning… pic.twitter.com/tynC6yoQel
— Karnataka Portfolio (@karnatakaportf) October 7, 2024
ಹಲ್ಲೆಯ ದೃಶ್ಯವನ್ನು ಕರ್ನಾಟಕ ಪೋರ್ಟ್‌ಫೋಲಿಯೊ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಥಣಿಸಂದ್ರ ಮುಖ್ಯರಸ್ತೆಯ ಹಜ್ ಭವನದ ಬಳಿ ವ್ಯಕ್ತಿಯೊಬ್ಬನ ಬಟ್ಟೆಯನ್ನು ಗುಂಪೊಂದು ಬಲವಂತವಾಗಿ ಬಿಚ್ಚಿಸಿ ಹಲ್ಲೆ ನಡೆಸಿದೆ. ವ್ಯಕ್ತಿಗೆ ಕಪಾಳಮೋಕ್ಷ ಮಾಡಿ, ಕ್ರೂರವಾಗಿ ಥಳಿಸಿದ್ದಾರೆ. ಹಾಡಹಗಲೇ ಇಂತಹ ಹಿಂಸಾತ್ಮಕ ಮತ್ತು ಅವಮಾನಕರ ಕೃತ್ಯ ನಡೆದಿರುವುದು ತೀವ್ರ ಕಳವಳಕಾರಿಯಾಗಿದೆ. ಸುಸಂಸ್ಕೃತ ಸಮಾಜದಲ್ಲಿ ಇಂತಹ ಕೃತ್ಯಗಳನ್ನು ಸಹಿಸಬಾರದು. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ಗೂಂಡಾಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಬೆಂಗಳೂರು ಪೊಲೀಸರಿಗೆ ಮನವಿ ಮಾಡಲಾಗಿದೆ.