Wednesday, 23rd October 2024

Gold Price Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Gold Price Today

ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿ ಇಂದು (ಅಕ್ಟೋಬರ್‌ 8) ತುಸು ಇಳಿಕೆ ಕಂಡುಬಂದಿದೆ (Gold Price Today). ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಸೋಮವಾರ ಕೊಂಚವೇ ಕೊಂಚ ಇಳಿಕೆಯಾಗಿತ್ತು. ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 19 ರೂ. ಮತ್ತು ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 21 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,100 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,745 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,800 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,000 ರೂ. ಮತ್ತು 100 ಗ್ರಾಂಗೆ 7,10,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 61,960 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,450 ರೂ. ಮತ್ತು 100 ಗ್ರಾಂಗೆ 7,74,500 ರೂ. ಪಾವತಿಸಬೇಕಾಗುತ್ತದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)
 ಬೆಂಗಳೂರು7,100 ರೂ.7,745 ರೂ
 ದೆಹಲಿ7,115 ರೂ.7,760 ರೂ.
 ಮುಂಬೈ7,100 ರೂ.7,745 ರೂ.
 ಚೆನ್ನೈ7,100 ರೂ.7,745 ರೂ.
 ಹೈದರಾಬಾದ್7,100 ರೂ.7,745 ರೂ.

ಬೆಳ್ಳಿ ಬೆಲೆ

ಇತ್ತ ಬೆಳ್ಳಿ ಬೆಲೆಯಲ್ಲಿಯೂ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಬೆಳ್ಳಿ 1 ಗ್ರಾಂಗೆ 90 ರೂ. ಇದೆ. 8 ಗ್ರಾಂಗೆ 720 ರೂ., 10 ಗ್ರಾಂಗೆ 900 ರೂ. ಮತ್ತು 1 ಕೆಜಿಗೆ 90,000 ರೂ. ಪಾವತಿಸಬೇಕಾಗುತ್ತದೆ.

ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುವ ಅಂಶಗಳು

ಶತಮಾನಗಳಿಂದ ಚಿನ್ನವು ಭಾರತೀಯ ಸಂಸ್ಕೃತಿ ಮತ್ತು ಅರ್ಥಶಾಸ್ತ್ರದ ಪ್ರಮುಖ ಭಾಗವಾಗಿ ಗುರುತಿಸಿಕೊಂಡಿದೆ. ದೇಶದಲ್ಲಿ ಆಭರಣವಾಗಿ ಮಾತ್ರವಲ್ಲ ಹೂಡಿಕೆಗೂ ಚಿನ್ನ ಬಳಕೆಯಾಗುತ್ತಿದೆ. ಭಾರತದಲ್ಲಿ ಪ್ರತಿ ದಿನ ಚಿನ್ನದ ದರದಲ್ಲಿ ಏರಿಳಿತ ಕಂಡು ಬರುತ್ತದೆ. ಅದಕ್ಕೆ ಕಾರಣವೇನು? ಚಿನ್ನದ ದರದ ಮೇಲೆ ಪ್ರಭಾವ ಬೀರುವ ಅಂಶಗಳು ಯಾವುವು? ಎನ್ನುವ ವಿವರ ಇಲ್ಲಿದೆ.

ಜಾಗತಿಕ ಮಾರುಕಟ್ಟೆಯ ಪ್ರಭಾವ: ಜಾಗತಿಕ ಚಿನ್ನದ ಮಾರುಕಟ್ಟೆಯ ಏರಿಳಿತ ಭಾರತದಲ್ಲಿ ಚಿನ್ನದ ದರವನ್ನು ನಿರ್ಧರಿಸುವಲ್ಲಿ ಪ್ರದಾನ ಪಾತ್ರವಹಿಸುತ್ತದೆ. ಭೌಗೋಳಿಕ ರಾಜಕೀಯ ಘಟನೆಗಳು, ಆರ್ಥಿಕ ಪರಿಸ್ಥಿತಿಗಳು ಮತ್ತು ಕರೆನ್ಸಿ ಏರಿಳಿತಗಳಂತಹ ಅಂಶಗಳು ಚಿನ್ನದ ದರದ ಮೇಲೆ ನೇರ ಪರಿಣಾಮ ಬೀರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳು ಅನಿಶ್ಚಿತತೆಗೆ ಒಳಗಾದಾಗ ಹೂಡಿಕೆದಾರರು ಹೆಚ್ಚಾಗಿ ಚಿನ್ನದತ್ತ ಮುಖ ಮಾಡುತ್ತಾರೆ. ಇದು ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಬೇಡಿಕೆ ಮತ್ತು ಪೂರೈಕೆ: ಭಾರತದಲ್ಲಿ ಚಿನ್ನವು ಅಮೂಲ್ಯ ಲೋಹ ಮಾತ್ರವಲ್ಲ ಸಂಸ್ಕೃತಿಯ ಸಂಕೇತವೂ ಹೌದು. ಹೀಗಾಗಿ ಹಬ್ಬಗಳು ಮತ್ತು ಮದುವೆ ಋತುವಿನಲ್ಲಿ ಚಿನ್ನಾಭರಣಗಳಿಗೆ ಬೇಡಿಕೆ ಹೆಚ್ಚಾಗಿ ದರದ ಏರಿಳಿತಗಳಿಗೆ ಕಾರಣವಾಗುತ್ತದೆ. ಜತೆಗೆ ಪೂರೈಕೆಯಲ್ಲಿನ ಅಡೆತಡೆಗಳು ಮತ್ತು ಆಮದು ಸುಂಕದಲ್ಲಿನ ಬದಲಾವಣೆಗಳು ಸ್ಥಳೀಯ ಚಿನ್ನದ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

ಸರ್ಕಾರದ ನೀತಿ: ಸರ್ಕಾರದ ನೀತಿಗಳು ಭಾರತದ ಚಿನ್ನದ ದರದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಆಮದು ಸುಂಕಗಳು, ತೆರಿಗೆಗಳು ಮತ್ತು ಚಿನ್ನದ ಆಮದಿನ ಮೇಲಿನ ನಿರ್ಬಂಧಗಳಲ್ಲಿನ ಬದಲಾವಣೆಗಳು ಏರಿಳಿತಗಳಿಗೆ ಕಾರಣವಾಗುತ್ತದೆ. ಹಣದುಬ್ಬರಕ್ಕೆ ಸಂಬಂಧಿಸಿದ ಸರ್ಕಾರದ ನೀತಿಗಳು ಚಿನ್ನದ ದರದ ಮೇಲೆ ಪ್ರಭಾವ ಬೀರುತ್ತದೆ.

ವಿನಿಮಯ ದರಗಳು: ಜಾಗತಿಕವಾಗಿ ಚಿನ್ನದ ಬೆಲೆ ಯುಎಸ್ ಡಾಲರ್‌ಗಳಲ್ಲಿರುವುದರಿಂದ ಭಾರತೀಯ ರೂಪಾಯಿ-ಯುಎಸ್ ಡಾಲರ್ ವಿನಿಮಯ ದರದಲ್ಲಿನ ಏರಿಳಿತಗಳು ಭಾರತದಲ್ಲಿ ಚಿನ್ನದ ದರದ ಮೇಲೆ ಪರಿಣಾಮ ಬೀರುವ ಮತ್ತೊಂದು ಪ್ರಮುಖ ಅಂಶ. ಡಾಲರ್ ವಿರುದ್ಧ ರೂಪಾಯಿ ಮೌಲ್ಯದ ಕುಸಿತ ಭಾರತದಲ್ಲಿ ಚಿನ್ನದ ಬೆಲೆ ಏರಿಕೆಗೆ ಕಾರಣವಾಗುತ್ತದೆ.

ಹೂಡಿಕೆದಾರರ ಮನಸ್ಥಿತಿ: ಚಿನ್ನದ ಮೇಲಿನ ಹೂಡಿಕೆಯೂ ಬೆಲೆಯನ್ನು ಪ್ರಭಾವಿಸುವ ಇನ್ನೊಂದು ಅಂಶ. ವ್ಯಾಪಾರ ಪ್ರಮಾಣಗಳು ಮತ್ತು ಇತರ ಹಣಕಾಸು ಮಾರುಕಟ್ಟೆಗಳಲ್ಲಿನ ಪ್ರವೃತ್ತಿಗಳು ಚಿನ್ನದ ಬೆಲೆಗಳ ಮೇಲೆ ಪ್ರಭಾವ ಬೀರುತ್ತವೆ.

ಈ ಸುದ್ದಿಯನ್ನೂ ಓದಿ: Unified Pension Scheme: ಏಕೀಕೃತ ಪಿಂಚಣಿ ಯೋಜನೆಯ ಅಧಿಸೂಚನೆ ಶೀಘ್ರದಲ್ಲೇ ಪ್ರಕಟ