Friday, 22nd November 2024

KCET Counselling 2024: ಕೆಸಿಇಟಿ ಕೌನ್ಸೆಲಿಂಗ್‌ನ 2ನೇ ವಿಸ್ತೃತ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

KCET Counselling 2024

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) 2024ನೇ ಸಾಲಿನ ಕೆಸಿಇಟಿ ಕೌನ್ಸೆಲಿಂಗ್‌ನ 2ನೇ ವಿಸ್ತೃತ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದೆ (KCET Counselling 2024). ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ cetonline.karnataka.gov.in.ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

2ನೇ ವಿಸ್ತೃತ ಸುತ್ತಿನಲ್ಲಿ ಸೀಟು ಪಡೆದ ಅಭ್ಯರ್ಥಿಗಳು ಪ್ರವೇಶಕ್ಕಾಗಿ ತಮ್ಮ ನಿಯೋಜಿತ ಕಾಲೇಜುಗಳಿಗೆ ಭೇಟಿ ನೀಡಬೇಕು ಮತ್ತು ಅಗತ್ಯವಿರುವ ಎಲ್ಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಎರಡನೇ ವಿಸ್ತೃತ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಹೀಗೆ ಪರಿಶೀಲಿಸಿ

  • cetonline.karnataka.gov.in. ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಹೋಮ್‌ಪೇಜ್‌ನಲ್ಲಿ ಕಂಡುಬರುವ ʼ07-10 UGCET-2024 ಎರಡನೇ ವಿಸ್ತೃತ ಸುತ್ತಿನ PROVISIONAL ಸೀಟು ಹಂಚಿಕೆ ಫಲಿತಾಂಶ ಲಿಂಕ್ 10-07-2024ʼ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪೇಜ್‌ ತೆರೆದುಕೊಳ್ಳುಳ್ಳುತ್ತದೆ.
  • ಇಲ್ಲಿ ನಿಮ್ಮ ಸಿಇಟಿ (CET) ನಂಬರ್‌ ನಮೂದಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಈಗ ತೆರೆ ಮೇಲೆ ಎರಡನೇ ವಿಸ್ತೃತ ಸುತ್ತಿನ ಸೀಟು ಹಂಚಿಕೆ ಫಲಿತಾಂಧ ಪ್ರಕಟವಾಗುತ್ತದೆ.
  • ಭವಿಷ್ಯದ ಅಗತ್ಯಗಳಿಗಾಗಿ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಎರಡನೇ ವಿಸ್ತೃತ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ

ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸ್‌ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಅಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Scholarship) ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: Scholarship: ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ