Friday, 22nd November 2024

Election Result 2024: ಬಿಜೆಪಿಯಿಂದ ಚುನಾವಣಾ ಆಯೋಗದ ಮೇಲೆ ಒತ್ತಡ? ಕಾಂಗ್ರೆಸ್‌ ನಾಯಕರಿಂದ ಅನುಮಾನ

jai ram ramesh

ನವದೆಹಲಿ: ಹರಿಯಾಣ ಮತ್ತು ಜಮ್ಮು-ಕಾಶ್ಮೀರದಲ್ಲಿ ಮತ ಎಣಿಕೆ(Counting) ಬಹುತೇಕ ಕೊನೆಯ ಹಂತಕ್ಕೆ ತಲುಪಿದೆ. ಈ ನಡುವೆ ಚುನಾವಣಾ ಆಯೋಗ(Election Commission)ದ ದಕ್ಷತೆ ಬಗ್ಗೆ ಕಾಂಗ್ರೆಸ್‌ ನಾಯಕರು ಪ್ರಶ್ನೆ ಎತ್ತಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಫಲಿತಾಂಶ(Election Result 2024) ಬಹಳ ತಡವಾಗಿ ಅಪ್ಡೇಟ್‌ ಆಗುತ್ತಿದೆ. 12ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದರೂ ಕೇವಲ 5-6 ಸುತ್ತಿನ ಫಲಿತಾಂಶಗಳು ಇಸಿ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿದೆ. ಇದರ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಕಾಂಗ್ರೆಸ್‌ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಚುನಾವಣಾ ಟ್ರೆಂಡ್‌ಗಳನ್ನು ನವೀಕರಿಸುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇಬ್ಬರೂ ನಾಯಕರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದ್ದು, ಆಡಳಿತದ ಮೇಲೆ ಪ್ರಭಾವ ಬೀರಲು ಬಿಜೆಪಿ ಹಳೆಯ ದತ್ತಾಂಶವನ್ನೇ ಪ್ರಕಟಿಸುವಂತೆ ಚುನಾವಣಾ ಆಯೋಗ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದ್ದಾರೆ.

X (ಹಿಂದೆ ಟ್ವಿಟ್ಟರ್) ನಲ್ಲಿ ಪೋಸ್ಟ್ ಮಾಡಿದ ರಮೇಶ್ ತಮ್ಮ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಗಳಂತೆ, ಹರಿಯಾಣದಲ್ಲಿ ನಾವು ಮತ್ತೆ ಇಸಿಐ ವೆಬ್‌ಸೈಟ್‌ನಲ್ಲಿ ಫಲಿತಾಂಶ ಬಹಳ ತಡವಾಗಿ ಪ್ರಕಟವಾಗುತ್ತಿದೆ. ಇದರ ಹಿಂದೆ ಬಿಜೆಪಿ ಕೈವಾಡ ಇದೆಯೇ? ಹಳೇಯ ಮತ್ತು ದಾರಿತಪ್ಪಿಸುವ ಪ್ರವೃತ್ತಿಗಳನ್ನು ಹಂಚಿಕೊಳ್ಳುವ ಮೂಲಕ ಆಡಳಿತದ ಮೇಲೆ ಒತ್ತಡವನ್ನು ಹೆಚ್ಚಿಸಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ನಾವು ದೂರು ಸಲ್ಲಿಸುತ್ತಿದ್ದೇವೆ. ಚುನಾವಣಾ ಆಯೋಗವು ನಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತದೆ ಎಂದು ನಾವು ಭಾವಿಸುತ್ತೇವೆ. 10-11 ಸುತ್ತಿನ ಫಲಿತಾಂಶಗಳು ಈಗಾಗಲೇ ಬಂದಿವೆ EC ವೆಬ್‌ಸೈಟ್‌ನಲ್ಲಿ ಕೇವಲ 4-5 ಸುತ್ತುಗಳನ್ನು ಮಾತ್ರ ಅಪ್ಡೇಟ್‌ ಮಾಡಲಾಗುತ್ತಿದೆ. ಇದು ಆಡಳಿತದ ಮೇಲೆ ಒತ್ತಡ ಹೇರುವ ತಂತ್ರವಾಗಿದೆ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ಈ ಬಗ್ಗೆ ಪವನ್ ಖೇರಾ ಈ ಕಳವಳಗಳ ವ್ಯಕ್ತಪಡಿಸಿದ್ದು, ಎಣಿಸಿದ ಸುತ್ತುಗಳ ನಿಜವಾದ ಸಂಖ್ಯೆ ಮತ್ತು ದೂರದರ್ಶನದಲ್ಲಿ ಪ್ರದರ್ಶಿಸಲಾದ ಡೇಟಾದ ನಡುವಿನ ವ್ಯತ್ಯಾಸಗಳನ್ನು ಅವರು ತಿಳಿಸಿದರು.

ಈ ಸುದ್ದಿಯನ್ನೂ ಓದಿ:Election Result 2024: ಹರಿಯಾಣದಲ್ಲಿ ಹ್ಯಾಟ್ರಿಕ್‌ನತ್ತ ಬಿಜೆಪಿ ದಾಪುಗಾಲು; ಕಮಲಪಾಳಯದಲ್ಲಿ ಗೆಲುವಿನ ನಗೆ