Saturday, 23rd November 2024

Karnataka Rain: ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ

Karnataka Rain

ಬೆಂಗಳೂರು: ಅ.9ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅ.10ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅ.11ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಅ.12 ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅ.14ರವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ.

ಇದನ್ನೂ ಓದಿ | Health Tips: ಸದಾ ಆರೋಗ್ಯವಾಗಿರಬೇಕೆ? ಹಾಗಾದ್ರೆ ವೈದ್ಯರು ಹೇಳಿದ ಈ ಸಲಹೆಗಳನ್ನು ಪಾಲಿಸಿ!

ಅ.10ರವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 20° C ಆಗಿರಬಹುದು.