ಬೆಂಗಳೂರು: ಕಬ್ಬನ್ ಪಾರ್ಕ್, ಲಾಲ್ ಬಾಗ್ ಉದ್ಯಾನಗಳು ಬೆಂಗಳೂರಿನ ಸೌಂದರ್ಯವನ್ನು ಇಮ್ಮಡಿಗೊಳಿಸಿವೆ. ಇದೀಗ ಉದ್ಯಾನ ನಗರಿಯ ಹಸಿರು ಹೊದಿಕೆ ಹೆಚ್ಚಿಸಲು ಮತ್ತೊಂದು ಬೃಹತ್ ಸಸ್ಯೋದ್ಯಾನ (Botanical Garden) ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಯಲಹಂಕದ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ‘ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ (Saalumarada Thimmakka Botanical Garden) ಅಭಿವೃದ್ಧಿಪಡಿಸಲು ಸರ್ಕಾರ ತೀರ್ಮಾನಿಸಿದೆ.
ಈ ಬಗ್ಗೆ ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮಾಹಿತಿ ನೀಡಿದ್ದು, ಬೆಂಗಳೂರಿನ ನಗರದಲ್ಲಿ ಸುಮಾರು 89 ಚದರ ಕಿ.ಮೀ. ನಷ್ಟು ಅರಣ್ಯ ಪ್ರದೇಶವಿದೆ. ನಗರದಲ್ಲಿ ವೃಕ್ಷ ಹೊದಿಕೆ ಶೇ. 6.81 ರಷ್ಟಿದ್ದು, ಕಳೆದ 10 ವರ್ಷದಲ್ಲಿ 5 ಚದರ ಕಿ.ಮೀ ನಷ್ಟು ಹಸಿರು ಹೊದಿಕೆ ಕಡಿಮೆಯಾಗಿದೆ. ಇದನ್ನು ಹೆಚ್ಚಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ. 153 ಎಕರೆ ಅರಣ್ಯ ಪ್ರದೇಶದಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಸ್ಯೋದ್ಯಾನ ಅಭಿವೃದ್ಧಿಪಡಿಸುವ ಯೋಜನೆ ಇದ್ದು, ಅದಕ್ಕೆ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಎಂದು ಹೆಸರಿಡಲಾಗುವುದು ಎಂದು ತಿಳಿಸಿದ್ದಾರೆ.
ಕಬ್ಬನ್ ಪಾರ್ಕ್ ಮಾದರಿಯಲ್ಲಿ ಯಲಹಂಕದಲ್ಲಿ 153 ಎಕರೆ ಅರಣ್ಯ ಜಮೀನಿನಲ್ಲಿ ಸಸ್ಯೋದ್ಯಾನ ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.#ಸಸ್ಯೋದ್ಯಾನ@CMofKarnataka @siddaramaiah @eshwar_khandre pic.twitter.com/iaMjNM0Jvg
— DIPR Karnataka (@KarnatakaVarthe) October 8, 2024
ಈ ಸುದ್ದಿಯನ್ನೂ ಓದಿ | CM Siddaramaiah: ಜಾತಿ ಗಣತಿ ನನ್ನ ಕನಸಿನ ಕೂಸು ಎನ್ನಲು ಯಾವ ಹಿಂಜರಿಕೆಯೂ ಇಲ್ಲ; ಸಿದ್ದರಾಮಯ್ಯ
ಬೆಂಗಳೂರು ನಗರದ ಉದ್ಯಾನಗರ ಎಂಬ ಹೆಗ್ಗಳಿಕೆಯನ್ನು ಮರುಸ್ಥಾಪನೆ ಮಾಡಲು ಸಾರ್ವಜನಿಕರ ಸಹಭಾಗಿತ್ವದಲ್ಲಿ ಮತ್ತಷ್ಟು ಸಸಿ ನೆಡಲಾಗುವುದು. ಒತ್ತುವರಿಯದ ಅರಣ್ಯ ಭೂಮಿ ಮರಳಿ ವಶಕ್ಕೆ ಪಡೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.