ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ (SSLC Exam) ಯಾವುದೇ ಗ್ರೇಸ್ ಮಾರ್ಕ್ಸ್ (Grace marks) ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ರೂಢಿ ಕೈಬಿಡಲಾಗುತ್ತಿದೆ ಎಂದರು.
ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ 10ನೇ ತರಗತಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಆಘಾತಕಾರಿ ಮಟ್ಟದಲ್ಲಿ ಕಳಪೆಯಾಗಿತ್ತು. ಅದನ್ನು ಮೇಲೆ ಎತ್ತರಿಸಲು ಕೃಪಾಂಕಗಳನ್ನು ಕೊಡಲಾಗಿತ್ತು.
ನಾವು ಪರೀಕ್ಷೆಯ ಪವಿತ್ರತೆಯನ್ನು ಉಳಿಸಿದ್ದೇವೆ. ಪರೀಕ್ಷೆಗಳ ಪವಿತ್ರತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದೆ. ಅಗತ್ಯವಿದ್ದವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು. ಗ್ರೇಸ್ ಮಾರ್ಕ್ ಪಡೆದವರು ಕೂಡ ಮತ್ತೊಮ್ಮೆ ಪರೀಕ್ಷೆ ಬರೆಯುತ್ತಿದ್ದಾರೆ. ಇಲಾಖೆಯನ್ನು ಸಮರ್ಥವಾಗಿ ನಡೆಸಿಕೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ನೀಡಿದ್ದಾರೆ. ಎರಡನೇ ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: Job Alert: ಎಸ್ಎಸ್ಎಲ್ಸಿ ಪಾಸಾದವರಿಗೆ 39,481 ಹುದ್ದೆಗಳ ಲಭ್ಯತೆ; ಅ.14 ಅರ್ಜಿ ಸಲ್ಲಿಸಲು ಕೊನೇ ದಿನ