Wednesday, 23rd October 2024

Free Training: ಯುವ ಜನರೇ ಗಮನಿಸಿ; ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Free Training

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ (Poultry Farming) ಕುರಿತ 10 ದಿನಗಳ ಉಚಿತ ತರಬೇತಿಗೆ (Free Training) ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ ಅನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಈ ಸುದ್ದಿಯನ್ನೂ ಓದಿ | Job Alert: ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ 39,481 ಹುದ್ದೆಗಳ ಲಭ್ಯತೆ; ಅ.14 ಅರ್ಜಿ ಸಲ್ಲಿಸಲು ಕೊನೇ ದಿನ

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ.

ಈ ಸುದ್ದಿಯನ್ನೂ ಓದಿ | Android Tips: ಆಂಡ್ರಾಯ್ಡ್ ಸ್ಮಾರ್ಟ್​​ಫೋನ್​ಗಳಲ್ಲಿ ಅಡಕವಾಗಿರುವ ಈ ಸೂಪರ್ ಹಿಡನ್ ಫೀಚರ್ ನಿಮಗೆ ಗೊತ್ತೇ?

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.