ಚಿಕ್ಕಬಳ್ಳಾಪುರ : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ/ ಬಾಲಕಿಯರ ವಿದ್ಯಾರ್ಥಿನಿಲಯಗಳು ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ತಾಲ್ಲೂಕು ಹಾಗೂ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯಗಳು ಗೌರಿಬಿದನೂರು ಮತ್ತು ಬಾಗೇಪಲ್ಲಿ ತಾಲ್ಲೂಕುಗಳ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಅರ್ಹ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾ0ಶದ ಮೂಲಕ ಆನ್ ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವನ್ನು ನವೆಂಬರ್ ೧೧ ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿನಿಲಯಗಳಲ್ಲಿ ಶೇ.೭೫ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ಧ) ಹಾಗೂ ಶೇ ೨೫ರಷ್ಟು ಹಿಂದುಳಿದ ವರ್ಗ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, #ಎಸ್.ಎ೮, ೨ನೇ ಮಹಡಿ, ಶಿಡ್ಲಘಟ್ಟ ರಸ್ತೆ, ಚಿಕ್ಕಬಳ್ಳಾಪುರ. ದೂರವಾಣಿ: ೦೮೧೫೬-೨೭೭೦೪೯ ತಾಲ್ಲೂಕು ವಿಸ್ತರಣಾಧಿಕಾರಿಗಳು, ಸಂಬ0ಧಿಸಿದ ನಿಲಯ ಪಾಲಕರು ಇವರನ್ನು ಸಂಪರ್ಕಿಸಬಹುದೆ0ದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.