ಬೆಂಗಳೂರು : ಹೈಕೋರ್ಟ್ ನಿರ್ದೇಶನಕ್ಕೆ ರಾಜ್ಯ ಸರ್ಕಾರ ಕೂಡ ಸಹಮತ ವ್ಯಕ್ತ ಪಡಿಸಿದ್ದು, ಗ್ರಾಮಸಮರವನ್ನು ಉಪ ಚುನಾವಣೆಯ ಬಳಿಕ ನಡೆಸಲು ಸಹಮತ ಸೂಚಿಸಿದೆ.
ಹೈಕೋರ್ಟ್ ರಾಜ್ಯದ ಗ್ರಾಮಪಂಚಾಯ್ತಿ ಚುನಾವಣೆಯನ್ನು 3 ವಾರಗಳಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು.
ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆಯ ಫಲಿತಾಂಶದ ನಂತರ ಮತ್ತೆ ಮಸ್ಕಿ ಉಪ ಚುನಾವಣೆಗೂ ದಿನಾಂಕ ಘೋಷಣೆಯಾಗಲಿದೆ. ಇಂತಹ ಉಪ ಚುನಾವಣೆಯ ನಂತ್ರ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಹಮತ ಸೂಚಿಸಿದೆ. ಈ ಮೂಲಕ ರಾಜ್ಯದ ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿನ್ನಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಸದ್ಯದಲ್ಲಿಯೇ ವೇಳಾಪಟ್ಟಿ ಪ್ರಕಟಗೊಳ್ಳಲಿದೆ.