Thursday, 24th October 2024

Job Guide: ನ್ಯಾಷನಲ್‌ ಫರ್ಟಿಲೈಸರ್ಸ್‌ ಲಿಮಿಟೆಡ್‌ನಲ್ಲಿದೆ 336 ಹುದ್ದೆ; 10ನೇ ತರಗತಿ ಪಾಸಾದವರು ಅಪ್ಲೈ ಮಾಡಿ

National Fertilizers Limited

ಬೆಂಗಳೂರು: 10, 12ನೇ ತರಗತಿ, ಡಿಪ್ಲೋಮಾ ತೇರ್ಗಡೆ ಹೊಂದಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ನ್ಯಾಷನಲ್‌ ಫರ್ಟಿಲೈಸರ್ಸ್‌ ಲಿಮಿಟೆಡ್‌ (National Fertilizers Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಿದೆ (NFL Non-Executive Recruitment 2024). ಒಟ್ಟು 336 ಹುದ್ದೆ ಖಾಲಿ ಇದ್ದು, ಭಾರತದ ಎಲ್ಲಿ ಬೇಕಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನವೆಂಬರ್‌ 8 (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಜೂನಿಯರ್ ಎಂಜಿನಿಯರಿಂಗ್ ಅಸಿಸ್ಟೆಂಟ್, ಸ್ಟೋರ್ ಅಸಿಸ್ಟೆಂಟ್, ಅಟೆಂಡೆಂಟ್, ನರ್ಸ್, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಷಿಯನ್ , ಎಕ್ಸ್-ರೇ ಟೆಕ್ನಿಷಿಯನ್ ಮತ್ತು ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಹುದ್ದೆಗಳಿಗೆ ಅನುಗುಣವಾಗಿ 10, 12ನೇ ತರಗತಿ, ಡಿಪ್ಲೋಮಾ, ಪದವಿ, ಬಿ.ಎಸ್‌ಸಿ, ಬಿ.ಕಾಂ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18-30 ವರ್ಷದ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಯೋಧರು ಅರ್ಜಿ ಶುಲ್ಕ ಸಲ್ಲಿಸಬೇಕಾಗಿಲ್ಲ. ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. + ಬ್ಯಾಂಕ್‌ ಚಾರ್ಜ್‌ ಅನ್ನು ಪಾವತಿಸಬೇಕು.

ಆಯ್ಕೆ ವಿಧಾನ

ಆಫ್‌ಲೈನ್‌ ಒಎಂಆರ್‌ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಬೆಂಗಳೂರು (ಕರ್ನಾಟಕ), ರಾಂಚಿ(ಝಾರ್ಖಂಡ್)‌, ಲಕ್ನೋ (ಉತ್ತರ ಪ್ರದೇಶ), ಚಂಡೀಗಢ (ಚಂಡೀಗಢ), ರಾಯ್‌ಪುರ (ಛತ್ತೀಸ್‌ಗಢ), ದಿಲ್ಲಿ, ನೋಯ್ಡಾ (ಉತ್ತರ ಪ್ರದೇಶ), ಭೋಪಾಲ್‌ (ಮಧ್ಯ ಪ್ರದೇಶ), ಅಹಮದಾಬಾದ್‌ (ಗುಜರಾತ್‌), ಹೈದರಾಬಾದ್‌ (ತೆಲಂಗಾಣ), ಚೆನ್ನೈ (ತಮಿಳುನಾಡು), ಕೊಚ್ಚಿ (ಕೇರಳ), ಜೈಪುರ (ರಾಜಸ್ತಾನ), ಮುಂಬೈ (ಮಹಾರಾಷ್ಟ್ರ), ಗುವಾಹಟಿ (ಅಸ್ಸಾಂ), ಕೋಲ್ಕತ್ತಾ (ಪಶ್ಚಿಮ ಬಂಗಾಳ), ಜಮ್ಮು (ಜಮ್ಮು ಮತ್ತು ಕಾಶ್ಮೀರ), ಭುವನೇಶ್ವರ್‌ (ಒಡಿಶಾ), ಅಮರಾವತಿ/ವಿಜವಾಡ (ಆಂಧ್ರ ಪ್ರದೇಶ), ಪಾಟ್ನಾ (ಬಿಹಾರ), ಗ್ವಾಲಿಯಾರ್‌ (ಮಧ್ಯ ಪ್ರದೇಶ)ನಲ್ಲಿ ಪರೀಕ್ಷೆ ನಡೆಯಲಿದೆ.

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/advinfo.php?advertisement=45c48cce2e2d7fbdea1afc51c7c6ad26)
  • ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯ ಮೇಲೆ ಕ್ಲಿಕ್‌ ಮಾಡಿ.
  • ಮೊದಲು ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಸರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಈ ಸುದ್ದಿಯನ್ನೂ ಓದಿ: Job News: Railway Recruitment 2024: ರೈಲ್ವೆಯಲ್ಲಿ 11558 ಹುದ್ದೆಗಳಿಗೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ