ಬೆಂಗಳೂರು: ಮುಜರಾಯಿ ಇಲಾಖೆ ಸಿ ವರ್ಗದ ದೇವಸ್ಥಾನಗಳ ಅಭಿವೃದ್ಧಿ (Muzrai Temples), ಅರ್ಚಕರ ಕ್ಷೇಮಾಭಿವೃದ್ಧಿಗೆ ಹೆಚ್ಚಿನ ಅನುದಾನ ಖರ್ಚು ಮಾಡಲು ಸಾಮಾನ್ಯ ಸಂಗ್ರಹಣಾ ನಿಧಿ ಮೊತ್ತ ಹೆಚ್ಚಳ ಮಾಡಲು ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ನಗರದ ಚಾಮರಾಜಪೇಟೆಯ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಗುರುವಾರ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಮಸೂದೆಗೆ ರಾಜ್ಯಪಾಲರ ಅನುಮೋದನೆ ಸಿಗಬೇಕಿದೆ. ಅನುಮೋದನೆಯಾದ ನಂತರ ಹೆಚ್ಚಾಗಿ ಸಂಗ್ರಹವಾಗುವ ನಿಧಿಯಲ್ಲಿ ಪ್ರತಿ ವರ್ಷ ನೂರು ದೇವಾಲಯಗಳಂತೆ ಸಿ ವರ್ಗದ ದೇವಾಲಯಗಳ ಜೀರ್ಣೋದ್ಧಾರ, ವಿದ್ಯಾರ್ಥಿ ವೇತನ, ಮರಣ ಉಪದಾನ, ಅರ್ಚಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
ದೇವಾಲಯಗಳ ಅಭಿವೃದ್ಧಿಗೆ, ಅರ್ಚಕರ ಕ್ಷೇಮಾಭಿವೃದ್ಧಿಗೆ ನಿಧಿ ಉಪಯೋಗ ಮಾಡಲು ಸರ್ಕಾರ ತೀರ್ಮಾನಿಸಿದೆ. ಅರ್ಚಕರ ವಿವಿಧ ಬೇಡಿಕೆಗಳನ್ನು ಸರ್ಕಾರದ ಹಂತದಲ್ಲಿ ಚರ್ಚಿಸಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | DK Suresh: ಮತ್ತೆ ತೆರಿಗೆ ಅನ್ಯಾಯ; ಕನ್ನಡಿಗರನ್ನು ಕೇಂದ್ರ ಕೆಣಕುತ್ತಿದೆ ಎಂದು ಡಿ.ಕೆ.ಸುರೇಶ್ ಆಕ್ರೋಶ
Gruhalakshmi Scheme: ‘ಗೃಹಲಕ್ಷ್ಮಿ’ ಹಣದಿಂದ ಮಗನಿಗೆ ಹೊಸ ಬೈಕ್ ಖರೀದಿಸಿದ ಮಹಿಳೆ!
ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ (Gruhalakshmi Scheme) ಹಣ ಕೂಡಿಟ್ಟು, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ (Bike) ವಾಹನ ಕೊಡಿಸುತ್ತಿದ್ದಾರೆ.
ಶುಕ್ರವಾರ ಬೈಕ್ ಖರೀದಿಸಲು ಮುಂಗಡ ಹಣ ನೀಡಿದ್ದಾರೆ. ‘ಗೃಹಲಕ್ಷಿ’ ಯೋಜನೆಯ ಹಣ ಇಂದು ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಬದುಕು ಕಟ್ಟಿಕೊಳ್ಳಲು ನೆರವಾಗಿದೆ.
ಈ ಸುದ್ದಿಯನ್ನೂ ಓದಿ | Tumkur Dasara: ಇಂದಿನಿಂದ 2 ದಿನಗಳ ಕಾಲ ದಸರಾ ಸಾಂಸ್ಕೃತಿಕ ಮೆರುಗು; ಏನೇನು ಕಾರ್ಯಕ್ರಮ?
ಮಹಾನವಮಿ ಅ.11 ರಂದು ಹಬ್ಬದಂದು ದ್ವಿಚಕ್ರ ವಾಹನ ಕೊಳ್ಳಲು ಮುಂದಾಗಿರುವ ಮಗನಿಗೆ ತಾಯಿ ಗೃಹಲಕ್ಷ್ಮೀ ಹಣ ನೀಡಿರುವ ವಿಷಯ ಕೇಳಿ ಖುಷಿಯಾಗಿದೆ. ತಾಯಿ -ಮಗನಿಗೆ ಮನಃಪೂರ್ವಕವಾಗಿ ಶುಭ ಕೋರುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.