Friday, 20th September 2024

12 ನೇ ಬ್ರಿಕ್ಸ್ ಶೃಂಗಸಭೆ ಇಂದು: ಒಂದೇ ವೇದಿಕೆಯಲ್ಲಿ ಮೋದಿ-ಶೀ ಜಿನ್ ಪಿಂಗ್

ನವದೆಹಲಿ : 12 ನೇ ಬ್ರಿಕ್ಸ್ ಶೃಂಗಸಭೆ ಇಂದು ನಡೆಯಲಿದ್ದು, ಪ್ರಧಾನಿ ಮೋದಿ ಮತ್ತು ಚೀನಾದ ಅಧ್ಯಕ್ಷ ಶೀ ಜಿನ್ ಪಿಂಗ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ (ಬ್ರಿಕ್ಸ್) ನಾಯಕರು ಮಂಗಳವಾರ ಸಭೆ ಸೇರಿ, ಕೊವಿಡ್-19 ಬಿಕ್ಕಟ್ಟಿನ ನಡುವೆ ಆರ್ಥಿಕ ಚೇತರಿಕೆಯ ಬಗ್ಗೆ ಗಮನ ಹರಿಸಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ಅವರು ವರ್ಚುವಲ್ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಶೃಂಗಸಭೆಯು ಬ್ರಿಕ್ಸ್ ಸಹಕಾರ ಮತ್ತು ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಕೋವಿಡ್-19 ಬಿಕ್ಕಟ್ಟಿನ ಪರಿಣಾಮವನ್ನು ತಗ್ಗಿಸುವ ಕ್ರಮಗಳು, ಮತ್ತು ಭಯೋತ್ಪಾದನೆ ನಿಗ್ರಹ, ವ್ಯಾಪಾರ, ಆರೋಗ್ಯ ಮತ್ತು ಇಂಧನ ಕ್ಷೇತ್ರಗಳಲ್ಲಿ ಸಹಕಾರಮುಂತಾದ ಪ್ರಮುಖ ಜಾಗತಿಕ ವಿಷಯಗಳ ಬಗ್ಗೆ ಚರ್ಚಿ ನಡೆಯಲಿದೆ ಎನ್ನಲಾಗಿದೆ.