ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್ಸಿಪಿಯ ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದಿಕಿ (Baba Siddique) ಅವರ ಮೇಲೆ ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಬಾಂದ್ರಾ ಪೂರ್ವದ ಶಾಸಕರಾಗಿರುವ ಸಿದ್ದೀಕ್ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿದ್ದಾಗ ಶನಿವಾರ ಸಂಜೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: Mallikarjun Kharge : ಬಿಜೆಪಿ ಭಯೋತ್ಪಾಕರ ಪಕ್ಷ ಎಂಬ ಖರ್ಗೆ ಟೀಕೆಗೆ ತಿರುಗೇಟು ಕೊಟ್ಟ ಬಿಜೆಪಿ
ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕ್ ಅವರು 48 ವರ್ಷಗಳ ಕಾಲ ಕಾಂಗ್ರೆಸ್ ಜತೆ ಇದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಝೀಶಾನ್ ಸಿದ್ದಿಕಿ ಅವರನ್ನು ಆಗಸ್ಟ್ ನಲ್ಲಿ ಕಾಂಗ್ರೆಸ್ ನಿಂದ ಉಚ್ಛಾಟಿಸಲಾಗಿತ್ತು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಈ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.