Wednesday, 30th October 2024

ಮರಾಠ ಪ್ರಾಧಿಕಾರ ಸ್ಥಾಪನೆ ವಿರೋಧಿಸಿ ಡಿ.5 ರಂದು ಕರ್ನಾಟಕ ಬಂದ್

ಬೆಂಗಳೂರು : ರಾಜ್ಯದಲ್ಲಿ ಮರಾಠ ಪ್ರಾಧಿಕಾರ ಸ್ಥಾಪನೆಗೆ ಕನ್ನಡ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಸರ್ಕಾರದ ನಿರ್ಧಾರ ಖಂಡಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.

ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ವಾಪಸ್ ಪಡೆಯದಿದ್ದರೆ ಡಿ.5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ, ಈ ಕೂಡಲೇ ಯಡಿಯೂರಪ್ಪ ರಾಜೀ ನಾಮೆ ನೀಡಬೇಕೆಂದು ಆಗ್ರಹ ಮಾಡಿದ್ದಾರೆ. ಜೊತೆಗೆ ಮರಾಠಿ ಪ್ರಾಧಿಕಾರ ರಚನೆಯ ಹಿಂದೆ ಭಾರಿ ಪಿತೂರಿ ಮಾಡಲಾಗಿದೆ ಎಂದರು.