Friday, 22nd November 2024

ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಲಿರಿಕಲ್‌ ವಿಡಿಯೊ ಪೋಸ್ಟರ್‌ ಬಿಡುಗಡೆ ಮಾಡಿದ ವೀರೇಂದ್ರ ಹೆಗ್ಗಡೆ

Veerendra Heggade ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆ ಅವರು ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಲಿರಿಕಲ್‌ ವಿಡಿಯೊ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಮಾಧವಾನಂದ Y ನಿರ್ಮಿಸುತ್ತಿರುವ ಶ್ರೀ ಸ. ಸ. ಪ್ರಭೂಜೀ ಮಹಾರಾಜರ ಮಾರ್ಗದರ್ಶನದಲ್ಲಿ ರಾಜಾ ರವಿಶಂಕರ್ ನಿರ್ದೇಶನದ ‘ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು’ ಚಿತ್ರದ ಹಾಡುಗಳು ತಯಾರಾಗಿದ್ದು, ಚಿತ್ರತಂಡದ ಸದಸ್ಯರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀಮಂಜನಾಥಸ್ವಾಮಿ ದರ್ಶನ ಪಡೆದುಕೊಂಡರು. ‌

ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ಅವರು “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ Lyrical Video ಪೋಸ್ಟರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ, ಆಶೀರ್ವದಿಸಿದರು. ಇಂಚಗೇರಿ ಅಧ್ಯಾತ್ಮ ಸಂಪ್ರದಾಯ ಹಾಗೂ ಚಲನಚಿತ್ರದ ಕುರಿತು ಅನೇಕ ವಿಷಯಗಳನ್ನು ಚರ್ಚಿಸಿದರು. ಚುಟು ಚುಟು ಖ್ಯಾತಿಯ ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕ ರವೀಂದ್ರ ಸೊರಗಾವಿ ಅವರು “ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿ ಪ್ರಧಾನ ಹಾಡಿಗೆ ಪ್ರಶಂಸಿಸಿದರು.

ಜಮಖಂಡಿ ತಾಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ ʼಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರುʼ ಚಿತ್ರದ ವಿಶೇಷವಾಗಿ ಶ್ರೀ ಸಂಗಮೇಶ್ವರರ ಚಿತ್ರದ ಹಾಡುಗಳು ಹಾಗು ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗಡೆಯವರು ಹಾರೈಸಿದರು.

ನೂತನ ಪ್ರತಿಭೆ ರವಿ ನಾರಾಯಣ್ ಶ್ರೀ ಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ತುಷಾರ್ ಮಲಗೊಂಡ, ಭವ್ಯಶ್ರೀ ರೈ, ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಸುದ್ದಿಯನ್ನೂ ಓದಿ | CM Siddaramaiah: ಸವದತ್ತಿಗೆ ಬರುವ ಭಕ್ತರ ಅನುಕೂಲಕ್ಕೆ ಗುಣಮಟ್ಟದ ಮೂಲಸೌಕರ್ಯ: ಸಿಎಂ ಸಿದ್ದರಾಮಯ್ಯ

ರಾಜಾ ರವಿಶಂಕರ್ ನಿರ್ದೇಶನ, ಸಿ ನಾರಾಯಣ್ ಛಾಯಾಗ್ರಾಹಣ, ಎ ಟಿ ರವೀಶ್ ಸಂಗೀತ, ಡಿ ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.