ಬೆಂಗಳೂರು: ‘ಮಾರ್ಟಿನ್’ ಸಿನಿಮಾ (Martin Kannada Movie) ರಿಲೀಸ್ ಆಗಿ ಮೂರು ದಿನಗಳು ಕಳೆದಿವೆ. ಈ ಚಿತ್ರವನ್ನು ಧ್ರುವ ಸರ್ಜಾ (Dhruva Sarja) ಅವರ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ದಸರಾ (Dasara) ಸಂದರ್ಭದಲ್ಲಿ ರಿಲೀಸ್ ಆದ ಈ ಚಿತ್ರ ಮೂರು ದಿನಗಳಲ್ಲಿ ಗಳಿಕೆ (Martin Movie Collectin) ಮಾಡಿದ್ದು ಎಷ್ಟು ಎಂಬ ಬಗ್ಗೆ ಮಾಹಿತಿ ದೊರೆತಿದೆ.
Sacnilk ವರದಿ ಮಾಡಿರುವ ಪ್ರಕಾರ ‘ಮಾರ್ಟಿನ್’ ಸಿನಿಮಾ ಮೂರು ದಿನಗಳಲ್ಲಿ ಸುಮಾರು 16 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆಯಂತೆ. ಮೊದಲ ದಿನ (ಅಕ್ಟೋಬರ್ 11) ‘ಮಾರ್ಟಿನ್’ ಚಿತ್ರ 6.7 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರನಡೇ ದಿನ (ಅಕ್ಟೋಬರ್ 12) 5.5 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ ಸುಮಾರು ನಾಲ್ಕು ಕೋಟಿ ರೂಪಾಯಿ ಹರಿದು ಬಂದಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 16 ಕೋಟಿ ರೂಪಾಯಿ ಆಗಿದೆ.
ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಈ ಚಿತ್ರವನ್ನು ರಿಲೀಸ್ ಮಾಡಲಾಗಿದೆ. ಅದ್ಧೂರಿ ಬಜೆಟ್ನಲ್ಲಿ ಸಿನಿಮಾ ಸಿದ್ಧವಾಗಿದೆ. ಈ ಚಿತ್ರಕ್ಕಾಗಿ ಧ್ರುವ ಫ್ಯಾನ್ಸ್ ಹಲವು ವರ್ಷಗಳು ಕಾದಿದ್ದರು. ಚಿತ್ರದಲ್ಲಿ ಧ್ರುವ ಸರ್ಜಾ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಎಪಿ ಅರ್ಜುನ್ ಅವರು ‘ಮಾರ್ಟಿನ್’ ಚಿತ್ರವನ್ನು ನಿರ್ದೇಶನ ಮಾಡಿದರೆ, ಉದಯ್ ಮೆಹ್ತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಧ್ರುವ ಸರ್ಜಾ ವೃತ್ತಿ ಬದುಕಿನಲ್ಲೇ ಅತಿ ದೊಡ್ಡ ಬಜೆಟ್ನ ಚಿತ್ರವಾಗಿದೆ. ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ ದಾಟಿದೆ ಎಂದು ವರದಿ ಆಗಿದೆ. ಈ ಚಿತ್ರದ ಕಲೆಕ್ಷನ್ ಬಗ್ಗೆ sacnilk ವರದಿ ಮಾಡಿದೆ.
ಬಜೆಟ್ಗೆ ಹೋಲಿಕೆ ಮಾಡಿದರೆ ಸಿನಿಮಾದ ಗಳಿಕೆ ಸ್ವಲ್ಪ ಕಡಿಮೆ ಆಯಿತು ಎಂದೇ ಹೇಳಬಹುದು. ಏಕೆಂದರೆ ಇದು ಕೇವಲ ಕನ್ನಡದ ಸಿನಿಮಾ ಮಾತ್ರವಲ್ಲ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಆಗಿದೆ. ಈ ಬಗ್ಗೆ ಚಿತ್ರತಂಡದವರು ಅಧಿಕೃತ ಮಾಹಿತಿ ನೀಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಮಿಶ್ರ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಇದನ್ನೂ ಓದಿ: Babar Azam: ಮಾರ್ಟಿನ್ ಸಿನಿಮಾ ನೋಡಿದ ಪಾಕ್ ಕ್ರಿಕೆಟಿಗ ಬಾಬರ್ ಅಜಂ!